ಕಲಬುರಗಿ: ಕರ್ನಾಟಕ ರಾಜ್ಯ (ಎನ್‍ಪಿಎಸ್) ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ವತಿಯಿಂದ ಎನ್‍ಪಿಎಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎನ್‍ಪಿಎಸ್ ಯೋಜನೆ ಅಡಿ ಬರುವ ರಾಜ್ಯ ಸರ್ಕಾರಿ ನವಖರರನ್ನು ಹಾಗೂ ವಿವಿಧ ನಿಗಮ/ಮಂಡಳಿ ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ 1-4-2006ರಿಂದ ಸರ್ಕಾರಿ ನೌಕರರಿಗೆ ಎನ್‍ಪಿಎಸ್ (ಪಿಂಚಣಿ) ಯೋಜನೆಯನ್ನು ಜಾರಿಗೊಳಿಸಬೇಕೆಂದು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬೃಹತ್ ಮೆರವಣಿಗೆ ನಡೆಸಿ ಜಗತ್ ವೃತ್ತದ ಮೂಲಕ ಹಾದು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ನೌಕರರ ಸಂದ್ಯಾಕಾಲದ ಬದುಕಿಗೆ ಮತ್ತು ಮರಣ ಹೊಂದಿದ ಕುಟುಂಬದ ಜೀವನ ನಿರ್ವಹಣೆಗೆ ಈ ಯೋಜನೆಯ ಅಗತ್ಯವಿದ್ದು, ಕೂಡಲೇ ಈ ಯೋಜನೆಯನ್ನು ನೌಕರರಿಗೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿವಿಧ ಇಲಾಖೆಯ ನೌಕರರು ಭಾಗವಹಿಸಿದ್ದರು.
ಸಂಘದ ಅಶೋಕ ಹೊನ್ನಾ, ಅಂಬುಜಾ ಎಂ.ಡಿ., ನಾಗರತ್ನ, ನೇತ್ರಾವತಿ, ಶಿವಾನಂದ ದ್ಯಾಮಗೊಂಡ, ಗುರುಶರಣ ನಾಗಶೆಟ್ಟಿ, ಶರಣಪ್ಪ ಶ್ರೀಗಿರಿ ಸೇರಿದಂತೆ ನೂರಾರು ನೌಕರ ಬಾಂಧವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…