ಕಲಬುರಗಿ: ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳಿಗೆ ಸೇರಿದಂತೆ ದಲಿತರ, ಕೃಷಿ ಕೂಲಿಕಾರರ ಮಹಿಳೆಯರ ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳನ್ನು ವಿರೋಧಿಸಿ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಸಮಿತಿಯ ರಾಷ್ಟ್ರೀಯ ಮಂಡಳಿ ಸದಸ್ಯ ಡಾ. ಮಹೇಶಕುಮಾರ ರಾಠೋಡ ತಿಳಿಸಿದರು.
ದೆಹಲಿಯ ಹರಕಿಶನ್ ಸಿಂಗ್ ಸುರ್ಜಿತ್ ಭವನದಲ್ಲಿ ನ. 5ರಂದು ನಡೆಯಲಿರುವ ರಾಷ್ಟ್ರೀಯ ಸಮಾವೇಶವು ರಾಷ್ಟ್ರೀಯ ಅಧ್ಯಕ್ಷರಾದ ರಾಮಮೂರ್ತಿಯವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುಭಾಷಿನಿ ಅಲಿ, ವಿ.ಎಸ್. ನಿರ್ಮಲ್, ಎನ್. ಪರಿಸ್ವಾಮಿ, ಜಿ.ಎಸ್. ಗೋರಾ ಅವರು ಸಮಾವೇಶ ಕುರಿತು ಮಾತನಾಡಲಿದ್ದಾರೆ ಎಂದು ಹೇಳಿದರು.
ಭೀಮಾಶಂಕರ ಮಾಡಿಯಾಳ, ಸಾಗರ ರಾಠೋಡ, ದತ್ತಾತ್ರೇಯ ಕಬಾಡೆ, ಸೇರಿದಂತೆ ಮತ್ತಿತರರಿದ್ದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ರೀತಿಯ ಘಟನೆಗಳು ಜರುಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿಲ್ಲ. ಇಂತಹ ಅಮಾನವೀಯ ಘಟನೆಗಳಿಗೆ ಕಡಿವಾಣ ಹಾಕುವ ಸಂಬಂಧ ಸಮಾವೇಶದಲ್ಲಿ ಚರ್ಚಿಸಿ ಹೋರಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. -ಭೀಮಾಶಂಕರ ಮಾಡಿಯಾಳ, ಕಲಬುರಗಿ