ಬಿಸಿ ಬಿಸಿ ಸುದ್ದಿ

6ಕ್ಕೆ TET ಪರೀಕ್ಷೆ: ನಕಲು ಮಾಡುವಲ್ಲಿ ಸಿಕ್ಕಿಬಿದ್ದಲ್ಲಿ ಸ್ಥಳದಲ್ಲಿಯೇ ಡಿಬಾರ್

ಕಲಬುರಗಿ: ಪ್ರಸಕ್ತ 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ಇದೇ ನವೆಂಬರ್ 6 ರಂದು ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ ನಕಲು ಮಾಡುವುದು ಕಂಡುಬಂದಲ್ಲಿ ಅಂತ ಅಭ್ಯರ್ಥಿಗಳನ್ನು ಸ್ಥಳದಲ್ಲಿಯೇ ಡಿಬಾರ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಟಿ.ಇ.ಟಿ. ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು, ನಕಲು ಮಾಡುವಲ್ಲಿ ಶಿಕ್ಷಕರು, ಇತರೆ ಸಿಬ್ಬಂದಿಗಳು ಸಹಕಾರ ನೀಡಿದಲ್ಲಿ ಅವರ ವಿರುದ್ಧವು ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ನವೆಂಬರ್ 6 ರಂದು ಭಾನುವಾರ ನಗರದ 46 ಕೇಂದ್ರಗಳಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಗೆ ಅಧಿವೇಶನ-1 ಪತ್ರಿಕೆ ಮತ್ತು 62 ಕೇಂದ್ರಗಳಲ್ಲಿ ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆ ವರೆಗೆ ನಡೆಯುವ ಅಧಿವೇಶನ-2 ಪತ್ರಿಕೆಯಲ್ಲಿ ಒಟ್ಟಾರೆ 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿ.ಸಿ ಅವರು ತಿಳಿಸಿದರು.

ಪರೀಕ್ಷೆ ಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಯಲು 62 ಪರೀಕ್ಷಾ ಕೇಂದ್ರಗಳಿಗೆ ತಲಾ ಓರ್ವರಂತೆ ಅಧೀಕ್ಷಕರನ್ನು, ಸ್ಥಾನಿಕ ಜಾಗೃತದಳವನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸಲು 18 ಜನ ರೂಟ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳಿರುವ ಕುರಿತು ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಿ.ಸಿ.ಟಿ.ವಿ. ಕಣ್ಗಾವಲಿನಲ್ಲಿ ಪರೀಕ್ಷೆ: ಟಿ.ಇ.ಟಿ. ಪರೀಕ್ಷೆಯನ್ನು ಸಂಪೂರ್ಣವಾಗಿ ಸಿ.ಸಿ.ಟಿ.ವಿ. ಕಣ್ಗಾವಲಿನಲ್ಲಿ ನಡೆಯಲಿದೆ. ಜೊತೆಗೆ ಇಲಾಖೆಯಿಂದ ಪರೀಕ್ಷೆ ಪತ್ರಿಕೆ ತೆರೆಯುವುದರಿಂದ ಹಿಡಿದು ಪರೀಕ್ಷೆ ಮುಕ್ತಾಯದ ನಂತರ ಬಂಡಲ್ ಪ್ಯಾಕ್ ಮಾಡುವವರೆಗೆ ಸಂಪೂರ್ಣ ವಿಡಿಯೋಗ್ರಾಫಿ ಮಾಡಲಾಗುತ್ತದೆ ಎಂದು ಡಿ.ಸಿ. ಯಶವಂತ ವಿ. ಗುರುಕರ್ ಮಾಹಿತಿ ನೀಡಿದರು.

ಮೊಬೈಲ್ ನಿಷೇಧ: ಪರೀಕ್ಷಾ ಕೊಠಡಿಗೆ ಯಾವುದೇ ಕಾರಣಕ್ಕು ಮೊಬೈಲ್, ಪುಸ್ತಕ ಹಾಳೆ, ಲಾಗ್ ಟೇಬಲ್, ಕ್ಯಾಲ್ಕುಲೇಟರ್, ಎಲೆಕ್ಟ್ರಾನಿಕ್ ಉಪಕರಣ ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಆದರೆ ಜಾಮಿಟ್ರಿ ಪರಿಕರಗಳನ್ನು ಮಾತ್ರ ತರಲು ಅವಕಾಶ ನೀಡಲಾಗಿದೆ.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಡಿ.ಡಿ.ಪಿ.ಐ ಸಕ್ರೆಪ್ಪಗೌಡ ಬಿರಾದಾರ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇನ್ನಿತರರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

58 mins ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

60 mins ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 hour ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

20 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago