ಕಲಬುರಗಿ/ ಜೇವರ್ಗಿ: ಬುಧವಾರ ನಿಧನರಾಗಿರುವ ದೇಶದ ಸ್ವಾತಂತ್ರ್ಯ ಹಾಗೂ ಹೈದ್ರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಶಾಮರಾವ ಕುಲಕರ್ಣಿ ಕೋಣಶಿರಸಗಿ (98) ಇವರ ನಿಧನಕ್ಕೆ ವಿದಾನಸಬೆ ವಿರೋಧ ಪಕ್ಷ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಕಂಬನಿ ಮಿಡಿದಿದ್ದಾರೆ.
ಸ್ವಗ್ರಾಮ ಕೋಣಸಿರಸಗಿಯಲ್ಲಿ ಬುಧವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆದ ಮೃತರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡ ಡಾ. ಅಜಯ್ ಸಿಂಗ್ ಅವರು ಅಗಲಿದ ಹೋರಾಗಾರರ ಪಾರ್ಥೀವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ದೇಶ ಸೇವೆಯನ್ನು ಕೊಂಡಾಡಿದ್ದಾರೆ.
ಸ್ವಾತಂತ್ರ್ಯ ಯೋಧ ಶಾಮರಾವ ಕುಲಕರ್ಣಿ ಅವರು ಕಲ್ಯಾಣ ಕರ್ನಾಟಕ ಪ್ರದೇಶದ ಸ್ವಾತಂತ್ರ್ಯಕ್ಕಾಗಿ ತಾಲೂಕಿನಲ್ಲಿ ವಜ್ಜಲ್, ಮಳ್ಳಿ, ಸಾಲ್ವಡಗಿ ಕ್ಯಾಂಪ್‍ಗಳಲ್ಲಿ ಇದ್ದುಕೊಂಡು ರಜಾಕರರ ವಿರೋಧ ದಂಗೆ ಎದ್ದು ತೊಡೆತಟ್ಟಿ ಹೋರಾಟಕ್ಕೆ ಇಳಿದಿದ್ದರು. ಇವರ ದೇಶ ಸೇವೆಯನ್ನು ಗುರುತಿಸಿ ಅನೇಕರು ಪ್ರಶಸ್ತಿ ನೀಡಿ ಗೌರವಿಸಿದ್ದರು. ಇವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ ಎಂದು ಡಾ. ಅಜಯ್ ಸಿಂಗ್ ಕಂಬನಿ ಮಿಡಿದಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…