ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ನ್ಯಾಷನಲ್ ಸ್ಕಾಲಪ್‍ಶಿಪ್ ಪೋರ್ಟಲ್‍ದಲ್ಲಿ ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1 ರಿಂದ 10ನೇ ತರಗತಿ)ಕ್ಕಾಗಿ ಅರ್ಜಿ ಸಲ್ಲಿಸಲು 2022ರ ನವೆಂಬರ್ 15 ಕೊನೆಯ ದಿನವಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (ಪಿಯುಸಿ ದಿಂದ ಪಿಜಿ) ಹಾಗೂ ಮೇರಿಟ್ ಕಮ್ ಮಿನ್ಸ್ ಸ್ಕಾಲರ್‍ಶಿಫ್‍ಗಾಗಿ (ಎಲ್ಲಾ ವೃತ್ತಿಪರ ಕೋರ್ಸ್‍ಗಳಿಗೆ) ಅರ್ಜಿ ಸಲ್ಲಿಸಲು 2022ರ ನವೆಂಬರ್ 30 ಕೊನೆಯ ದಿನವಾಗಿದೆ.
ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಫಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ/ನಂತರದ ಹಾಗೂ ವೃತ್ತಿಪರ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ನಿಗದಿತ ದಿನಾಂಕದೊಳಗಾಗಿ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಹ ವಿದ್ಯಾರ್ಥಿಗಳು www.scholarship.gov.in ಅಲ್ಪಸಂಖ್ಯಾತರ ಸಚಿವಾಲಯದ ಕೇಂದ್ರ ಸರ್ಕಾರದ ಪೋರ್ಟಲ್ www.minorityaffairs.gov.in ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯದ ಪೋರ್ಟಲ್ http://gokdom.kar.nic ಗೆ ಲಾಗಿನ್ ಆಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕಲಬುರಗಿ ಮಿನಿವಿಧಾನ ಸೌಧದ 4ನೇ ಮಹಡಿಯಲ್ಲಿನ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಹಾಗೂ ದೂರವಾಣಿ ಸಂಖ್ಯೆ 08472-244006ಗೆ ಸಂಪರ್ಕಿಸಬೇಕು. ಇದಲ್ಲದೇ ಕೆಳಕಂಡ ಆಯಾ ತಾಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬೇಕು.
ಅಲ್ಪಸಂಖ್ಯಾತರ ರಾಜ್ಯ ಸಹಾಯವಾಣಿ-8277799990 ಹಾಗೂ ಆಳಂದ-8147775722, ಅಫಜಲಪೂರ-9741279422, ಚಿಂಚೋಳಿ-8722326201, ಸೇಡಂ-7760680162, ಚಿತ್ತಾಪೂರ-9741168681, ಜೇವರ್ಗಿ-9535775141 ಹಾಗೂ ಕಲಬುರಗಿ-9741279422 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…