ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕಾರ ಅವರನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ, ಅಕ್ರಮ ಬಯಲಿಗೆ ಬಂದ ಬಳಿಕ ಈವರೆಗೆ ತಲೆಮರೆಸಿಕೊಂಡಿದ್ದರು.
ನಿನ್ನೆ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಪೊಲೀಸರು ಆರೋಪಿಯನ್ನು ವಿಚಾರಿಸುತ್ತಿದ್ದು, ಈ ಅಕ್ರಮದಲ್ಲಿ ಭಾಗಿಯಗಿರುವ ಇತರರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.