ಬೆಂಗಳೂರು: ʼಕರ್ನಾಟಕ ರಾಜ್ಯ ಮೊದಲಿನಿಂದಲೂ ಲಿಂಗ ಸಮಾನತೆಗೆ ಹೆಚ್ಚು ಒತ್ತುಕೊಟ್ಟ ರಾಜ್ಯ. ಇಲ್ಲಿನ ಮಹಿಳೆಯರು ಇತಿಹಾಸದುದ್ದಕ್ಕೂ ಯಶಸ್ಸನ್ನು ಸಾಧಿಸುತ್ತ ಬಂದವರುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅಭಿಪ್ರಾಯಪಟ್ಟರು.
ಬೆಂಗಳೂರಿನ ಅರಮನೆ ಆವರಣದಲ್ಲಿ ನವೆಂಬರ್ 2ರಿಂದ ಶುರುವಾದ ಬಹುನಿರೀಕ್ಷಿತ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವು ಅದ್ಧೂರಿಯಾಗಿ ನಡೆಯಿತು. ಸಮಾವೇಶದ ಎರಡನೇ ದಿನದಂದು (ನವೆಂಬರ್ 3,2022)ಆಯೋಜಿಸಲಾದ “ADVANCING GENDER DIVERSITY: JOURNEY POST SHATTERING THE GLASS CEILING” ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಚಿವ ಹಾಲಪ್ಪ ಬಸಪ್ಪ ಆಚಾರ್ ವಹಿಸಿದ್ದರು.
ʼಜಾಗತಿಕ ಹೂಡಿಕೆದಾರರ ಸಮಾವೇಶ – 2022ʼರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅವರು ʼಮಹಿಳಾ ಉದ್ದಿಮೆದಾರರು ಹಾಗೂ ಹಾಗೂ ಬೇರೆ ಬೇರೆ ವೃತ್ತಿಗಳಲ್ಲಿ ನಿರತವಾಗಿರುವ ಮಹಿಳೆಯರಿಗೆ ನಿರಂತರವಾಗಿ ಬೆಂಬಲ ಸಿಗುತ್ತಿದೆ. ಆದರೆ ಮಹಿಳಾ ನೇತೃತ್ವದ ಉದ್ಯಮಗಳ ಉಳಿವಿಗಾಗಿ ಬಂಡವಾಳ ಹಾಗೂ ಮಾರುಕಟ್ಟೆ ಒದಗಿಸುವ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಿದೆ.
ಮಹಿಳೆಯರನ್ನು ಅನೌಪಚಾರಿಕ ವಲಯದಿಂದ ಹೊರತರಲು ಹಾಗೂ ಸುಸ್ಥಿರವಾದ ಮಹಿಳಾ ಕೇಂದ್ರಿತ MSME ವಲಯವನ್ನು ನಿರ್ಮಾಣ ಮಾಡುವ ದೃಷ್ಟಿಯಿಂದ ಆಧುನಿಕ ವಲಯಗಳಲ್ಲಿ ಕೌಶಲ್ಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಅಗತ್ಯವಿದೆ. ಈಗಾಗಲೇ ತಮ್ಮ ಸಾಧನೆಯ ಮೂಲಕ ಕರ್ನಾಟಕ ಹಾಗೂ ದೇಶಕ್ಕೆ ಹೆಮ್ಮೆ ತಂದ ಎಲ್ಲ ಮಹಿಳಾ ಸಾಧಕರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಅವರು ಹೇಳಿದರು.
ಮೂರುದಿನಗಳ ಅವಧಿಯ ಈ ಸಮಾವೇಶದಲ್ಲಿ ರಾಷ್ಟ್ರ ಹಾಗೂ ಜಾಗತಿಕ ಮಟ್ಟದ ಪ್ರಮುಖ ಕೈಗಾರಿಕೋದ್ಯಮಿಗಳು, ಜಾಗತಿಕ ಮಟ್ಟದ ಭಾಷಣಕಾರರು, ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕೈಗಾರಿಕಾ ಹಾಗೂ ವ್ಯಾಪಾರ ಸಂಘ ಸಂಸ್ಥೆಗಳು ಭಾಗವಹಿಸಿವೆ. ಹಾಗೇ ಸಮಾವೇಶದಲ್ಲಿ ಹಲವಾರು ಪ್ರಚಲಿತ ವಿಷಯಗಳ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…