ಸುರಪುರ: ಜಿಲ್ಲೆಯ ಕೊರಳ್ಳಿ ಗ್ರಾಮದಲ್ಲಿ ಅಪ್ರಾಪ್ತ ಮೇಲೆ ಕೃತ್ಯ ಎಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಗಲ್ಲು ಶಿಕ್ಷೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗವಹಸಿದ್ದ ಸಂಘಟನೆಯ ಈಶಾನ್ಯ ವಲಯ ಸಂಘಟನಾ ಕಾರ್ಯದರ್ಶಿ ದೇವು ಬೀಗುಡಿ ಮಾತನಾಡಿ,ದೇಶದಲ್ಲಿ ಅನೇಕ ಕಡೆಗಳಲ್ಲಿ ನಡೆಯುತ್ತಿರುವ ಹೀನಕೃತ್ಯ ಘಟನೆಗಳು ಮಾನವ ಸಮಾಜ ತಲೆತಗ್ಗಿಸುವಂತಾಗಿದೆ, ಅಂತಹ ಘಟನೆಗಳ ಸಾಲಿಗೆ ಈಗ ಗ್ರಾಮದಲ್ಲಿ ನಡೆದಿರುವ ಘಟನೆ ಇಡೀ ನಾಡಿನ ಜನರು ತಲೆ ತಗ್ಗಿಸುವಂತಾಗಿದೆ, ಅಪ್ರಾಪ್ತ ಬಾಲಕಿ ಬಹಿರ್ದೇಶೆಗೆ ಹೋದಾಗ ಬಾಲಕಿಯನ್ನು ಹೊತ್ತೋಯ್ದು ಹೀನ ಕೃತ್ಯ ಎಸಗಿರುವುದು ಅತ್ಯಂತ ಹೇಯ ಕೃತ್ಯವಾಗಿದೆ.
ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿರುವುದಾಗಿ ಹೇಳಲಾಗುತ್ತಿದೆ.ಆದರೆ ಕೇವಲ ಒಬ್ಬನ ಬಂಧಿಸಿದ ಮಾತ್ರಕ್ಕೆ ಸಾಲದು ಕೂಡಲೇ ಘಟನೆಯ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು.ಒಂದು ವೇಳೆ ನಿರ್ಲಕ್ಷ್ಯ ತೋರಿದಲ್ಲಿ ಕನ್ನಡ ಸೇನೆ ಕರ್ನಾಟಕ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಮಲ್ಲು ಹೊಸ್ಮನಿ,ಪ್ರಧಾನ ಕಾರ್ಯದರ್ಶಿ ಭಾಗನಾಥ ನಾಯಕ ಗುತ್ತೇದಾರ,ಪ್ರಭು ನಾಯಕ,ರವಿಚಂದ್ರ ಠಾಣಾಗುಂದಿ,ಹುಸನಪ್ಪ ಜೀವಣಗಿ,ಭಿಮನಗೌಡ ತಳ್ಳಳ್ಳಿ,ದೇವು ಮಾಲಗತ್ತಿ,ವೆಂಕಟೇಶ ಹೆಮ್ಮಡಗಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…