ಸುರಪುರ: ರಾಜ್ಯದಲ್ಲಿನ ವಿದ್ಯಾರ್ಥಿಗಳ 2021-22ನೇ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಗಿದೆ.
ನಗರದ ತಹಸೀಲ್ದಾರ್ ಕಚೇರಿ ಮುಂದೆ ಜಮಾಯಿಸಿದ ಅನೇಕ ಎಬಿವಿಪಿ ಮುಖಂಡರು ಸರಕಾರ ವಿದ್ಯಾರ್ಥಿಗಳ ವಿಷಯದಲ್ಲಿ ನಿರ್ಲಕ್ಷ್ಯ ತೋರುತ್ತಿದೆ,ರಾಜ್ಯದಲ್ಲಿನ ಅನೇಕ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಿಲ್ಲ,ಇದರಿಂದಾಗಿ ಅನೇಕ ವಿದ್ಯಾರ್ಥಿಗಳ ಓದಿಗೆ ತೀವ್ರ ತೊಂದರೆಯುಂಟಾಗಿದೆ.ಹೆಚ್ಚಿನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದಲೇ ತಮ್ಮ ಓದಿಗೆ ಉಪಯೋಗಿಸಿಕೊಳ್ಳುತ್ತಾರೆ ಅಂತಹ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು ಎಂದರು.
ಅಲ್ಲದೆ ಎನ್.ಇ.ಪಿ ಜಾರಿಯಾದ ನಂತರ ಎಲ್ಲಾ ವಿಶ್ವವಿದ್ಯಾಲಯಗಳು ಸಿ.ಎಮ್.ಎಸ್ ತಂತ್ರಾಂಶವನ್ನು ಬಳಸಿಯೇ ದಾಖಲಾತಿಯಿಂದ ಫಲಿತಾಂಶದ ವರೆಗೆ ಎಲ್ಲಾ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ.ಆದರೆ ಈ ತಂತ್ರಾಂಶದಲ್ಲಿನ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಹಾಸ್ಟೆಲ್ ಅರ್ಜಿ ಹಾಕುವುದು,ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು,ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆ ಅನುಭವಿಸುವಂತಾಗಿದೆ.ವಿಶ್ವವಿದ್ಯಾಲಯಗಳು ಸರಿಯಾದ ರೀತಿಯಲ್ಲಿ ಫಲಿತಾಂಶ ನೀಡದೆ ಇರುವುದರಿಂದ ವಿದ್ಯಾರ್ಥಿ ಸಮೂಹ ಸಮಸ್ಯೆ ಎದುರಿಸುತ್ತಿದೆ.ಆದ್ದರಿಂದ ಕೂಡಲೇ ಸಿ.ಎಮ್.ಎಸ್ ತಂತ್ರಾಂಶದಲ್ಲಿನ ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ಧಾರ್ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಪರಿಷತ್ ನಗರಾಧ್ಯಕ್ಷ ಹಾಗೂ ಉಪನ್ಯಾಸಕ ಹಣಮಂತ ಸಿಂಗೆ,ನಗರದ ಕಾರ್ಯದರ್ಶಿ ಹುಲಗಪ್ಪ ಮೇದಾ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…