ಸುರಪುರ: ರಾಯಚೂರ ಜಿಲ್ಲೆಯ ದೇವದುರ್ಗದಲ್ಲಿನ ಜೆಡಿಎಸ್ ಪಕ್ಷದ ಮುಖಂಡೆಯಾಗಿರುವ ಕರೆಮ್ಮ ನಾಯಕ ಅವರ ವಿರುದ್ಧ ಅವಾಚ್ಯ ಪದಗಳಿಂದ ಶಾಸಕ ಶಿವನಗೌಡ ನಾಯಕ ನಿಂದಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಮುಖಂಡರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ್ ವಜಾಹತ್ ಹುಸೇನ್ ಮಾತನಾಡಿ,ನಮ್ಮ ಪಕ್ಷದ ನಾಯಕಿಯಾಗಿರುವ ದೇವದುರ್ಗದ ಮುಖಂಡೆ ಕರೆಮ್ಮ ನಾಯಕ ಅವರ ವಿರುದ್ಧ ಶಾಸಕ ಶಿವನಗೌಡ ನಾಯಕ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ,ಅಲ್ಲದೆ ಅವರ ಮೇಲೆ ಬೆಂಬಲಿಗರಿಂದ ಹಲ್ಲೆ ಮಾಡಸಲು ಯತ್ನಿಸಿದ್ದಾರೆ.ಆದ್ದರಿಂದ ಶಾಸಕ ಶಿವನಗೌಡ ನಾಯಕ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು,ಇಲ್ಲವಾದಲ್ಲಿ ಮುಂದೆ ಜೆಡಿಎಸ್ ಪಕ್ಷದಿಂದ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿರಸ್ತೆದಾರರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಯುವ ಸಂಘಟನಾ ಕಾರ್ಯದರ್ಶಿ ತಿಪ್ಪಣ್ಣ ಪಾಟೀಲ್,ತಾಲೂಕು ಅಧ್ಯಕ್ಷ ಸಂಗಣ್ಣ ಬಾಕ್ಲಿ,ಉಪಾಧ್ಯಕ್ಷ ಗೋಪಾಲ ಬಾಗಲಕೋಟೆ,ಶೌಕತ್ ಅಲಿ ಖುರೇಷಿ,ಶಾಂತಪ್ಪ ತಳವಾರಗೇರ,ದೇವಿಂದ್ರಪ್ಪ ಬಳಿಚಕ್ರ,ಲಕ್ಷ್ಮಣ ಕವಡಿಮಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…