ಬಿಸಿ ಬಿಸಿ ಸುದ್ದಿ

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆಗೆ ಮಾಜಿ ಸಿಎಂ ಆಗ್ರಹ

ತುಮಕೂರಿನಲ್ಲಿ ಬಾಣಂತಿ, ಅವಳಿ ಶಿಶು ಧಾರುಣ ಸಾವು ಪ್ರಕರಣ

ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ಮತ್ತು ಅಲ್ಲಿನ ವೈದ್ಯೆಯ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಆಕೆಯ ಇಬ್ಬರು ನವಜಾತ ಶಿಶುಗಳು ಸಾವನ್ನಪ್ಪಿರುವ ಬಗ್ಗೆ ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ದುರಂತಕ್ಕೆ ನೈತಿಕ ಹೊಣೆ ಹೊತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಇಡೀ ರಾಜ್ಯವೇ ತಲೆ ತಗ್ಗಿಸುವ ಘಟನೆ. ಕೂಡಲೇ ಸಚಿವ ಸುಧಾಕರ್ ರಾಜೀನಾಮೆ ನೀಡಬೇಕು, ಇಲ್ಲವೇ ಸ್ವತಃ ಮುಖ್ಯಮಂತ್ರಿಗಳೇ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕೇವಲ ರಾಜಕೀಯ, ಚುನಾವಣೆ, ಪ್ರಚಾರದಲ್ಲಿ ಮುಳುಗೇಳುತ್ತಿರುವ ರಾಜ್ಯ ಬಿಜೆಪಿ ಸರಕಾರದ ಆಡಳಿತದ ಕರಾಳ ಮುಖದ ಬಗ್ಗೆ (ಮಂಡ್ಯದ ಘಟನೆ) ಸ್ವಲ್ಪ ಹೊತ್ತಿನ ಹಿಂದೆ ನಾನು ಟ್ವೀಟ್ ಮಾಡಿದ್ದೆ. ಆದರೆ, ಅದಕ್ಕಿಂತ ಭಯಾನಕ ಹಾಗೂ ಕರುಳು ಹಿಂಡುವ, ಇಡೀ ಕರ್ನಾಟಕವೇ ತಲೆ ತಗ್ಗಿಸುವ ದುರ್ಘಟನೆ ತುಮಕೂರಿನಲ್ಲಿ ನಡೆದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜತೆಗೇ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ ಎಂದು ಅವರು ಟೀಕಿಸಿದ್ದಾರೆ.

ಪ್ರಸವ ವೇದನೆಯಿಂದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆಯನ್ನು ನಿನ್ನೆ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳಿಸಿದ್ದಾರೆ. ಹೆರಿಗೆ ನೋವಿನಿಂದ ನರಳುತ್ತಿದ್ದ ಆ ಮಹಿಳೆ, ತನಗೆ ಹೆರಿಗೆ ಮಾಡಿಸಿ ಎಂದು ಆ ವೈದ್ಯೆಯನ್ನು ಪರಿಪರಿಯಾಗಿ ಅಂಗಲಾಚಿದ್ದಾರೆ.

ಆದರೆ, ದರ್ಪದಿಂದ ವರ್ತಿಸಿದ ವೈದ್ಯೆ, ಹೆರಿಗೆ ಮಾಡಿಸದೆ ಮಾನವೀಯತೆಯನ್ನೇ ಮರೆತು ಆಕೆಯನ್ನು ವಾಪಸ್ ಕಳಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಹೆರಿಗೆ ಮಾಡಿಸಿಕೋ ಎಂದು ತಾಕೀತು ಮಾಡಿದ್ದಾರೆ. ಬೇರೆ ದಾರಿ ಇಲ್ಲದೆ, ಹಣವೂ ಇಲ್ಲದೆ ಹೊಟ್ಟೆ ನೋವಿನಲ್ಲೇ ಮನೆಗೆ ವಾಪಸ್ ಬಂದಿದ್ದ ಆ ಮಹಿಳೆ, ಇಡೀ ರಾತ್ರಿ ನರಳಿನರಳಿ ಬೆಳಗಿನಜಾವ ಒಂದು ಮಗುವಿಗೆ ಜನ್ಮ ನೀಡಿದ್ದಾರೆ. ಮತ್ತೊಂದು ಮಗುವಿಗೆ ಜನ್ಮ ನೀಡುವಾಗ ತೀವ್ರ ರಕ್ತಸ್ರಾವವಾಗಿ ಎರಡು ಮಕ್ಕಳ ಜತೆಗೆ ತಾನೂ ಸಾವನ್ನಪ್ಪಿದ್ದಾರೆ. 6 ವರ್ಷದ ಇನ್ನೊಂದು ಹೆಣ್ಣು ಮಗು ತಬ್ಬಲಿ ಆಗಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಬಾಣಂತಿ ಮತ್ತು ಅವಳಿ ಹಸುಗೂಸುಗಳ ಧಾರುಣ ಸಾವಿಗೆ ಆ ವೈದ್ಯೆ ಮತ್ತು ಸರಕಾರವೇ ನೇರ ಹೊಣೆ. ಸ್ವತಃ ವೈದ್ಯರೆಂದು ಹೇಳಿಕೊಳ್ಳುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಉಸ್ತುವಾರಿಯಲ್ಲಿ ಆರೋಗ್ಯ ಇಲಾಖೆ ಎಷ್ಟರ ಮಟ್ಟಿಗೆ ಹಳ್ಳಹಿಡಿದು ಹೋಗಿದೆ ಎನ್ನುವುದಕ್ಕೆ ಈ ಸಾವುಗಳೇ ಸಾಕ್ಷಿ. ಮಾನವೀಯತೆ ಇಲ್ಲದ ವೈದ್ಯೆ ಹಾಗೂ ಸರಕಾರವೇ ಮಾಡಿದ ಕೊಲೆಗಳಿವು ಎಂದು ಹೆಚ್ ಡಿಕೆ ಕಿಡಿಕಾರಿದ್ದಾರೆ.

ಕೂಡಲೇ ಆ ವೈದ್ಯೆಯನ್ನು ಸೇವೆಯಿಂದ ವಜಾ ಮಾಡಬೇಕು. ಕರ್ತವ್ಯಲೋಪ ಎಸಗಿದ ಇತರೆ ಸಿಬ್ಬಂದಿಗೂ ತಕ್ಕಶಾಸ್ತಿ ಮಾಡಬೇಕು. ಜಿಲ್ಲಾಸ್ಪತ್ರೆಯ ಅಧಿಕ್ಷರನ್ನೂ ಇದಕ್ಕೆ ಹೊಣೆ ಮಾಡಿ ಮನೆಗೆ ಕಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸರಕಾರಿ ಕೊಲೆಗಳಿಗೆ ಆರೋಗ್ಯ ಸಚಿವರು ನೈತಿಕ ಹೊಣೆ ಹೊರಲೇಬೇಕು, ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜೀನಾಮೆ ನೀಡಲೇಬೇಕು, ಇಲ್ಲವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು. ತಬ್ಬಲಿಯಾದ ಮಗುವಿನ ಜವಾಬ್ದಾರಿಯನ್ನು ಸರಕಾರವೇ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಚುನಾವಣೆಗಳು, ಮುಖ್ಯಮಂತ್ರಿಗಳ ಬದಲಾವಣೆ, ಅಬ್ಬರದ ಪ್ರಚಾರವೇ ಸುದ್ದಿಯಾಗುತ್ತಿದೆ. ಆದರೆ, ಅಭಿವೃದ್ಧಿಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದೆ. ಬಾಣಂತಿ ಮತ್ತು ಹಸುಗೂಸುಗಳ ದುರಂತ ಸಾವು ಕರ್ನಾಟಕದ ಆತ್ಮಸಾಕ್ಷಿಯನ್ನು ಕಲಕಿದೆ. ಆ ನತದೃಷ್ಟ ಮಹಿಳೆ, ಆಕೆಯ ಮಕ್ಕಳಿಬ್ಬರಿಗೂ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago