ಬಿಸಿ ಬಿಸಿ ಸುದ್ದಿ

ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿಗೆ ಪೊಲೀಸರ ಕಿರುಕುಳ; ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ಆಸ್ಪತ್ರೆಗೆ ಬೈಕಿನಲ್ಲಿ ಕರೆದೊಯ್ಯುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ನಿಯಮಗಳ ನೆಪದಲ್ಲಿ ಕಿರುಕುಳ ನೀಡಿದ ಪೊಲೀಸರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಮಂಡ್ಯದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ ವಿಷಯ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಬೈಕ್‌ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು. ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಅವರು ಕಿಡಿಕಾರಿದ್ದಾರೆ.

ಹಣವಿಲ್ಲದೇ ದಂಪತಿ ರಸ್ತೆಯಲ್ಲೇ ಪರದಾಡಿದ್ದಾರೆ. ಆ ಮಗುವಿನ ತಂದೆ ಹಣಕ್ಕಾಗಿ ಒದ್ದಾಡಿದ್ದಾರೆ, ಆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ರಸ್ತೆ ನಡುವೆಯೇ ಮಡಿಲಲ್ಲಿಟ್ಟುಕೊಂಡು ಅನುಭವಿಸಿದ ವೇದನೆ ರಾಜ್ಯ ಬಿಜೆಪಿ ಸರಕಾರದ ಕೆಟ್ಟ ಆಡಳಿತಕ್ಕೆ ಹಿಡಿದ ಕನ್ನಡಿ, ಮನುಷ್ಯತ್ವ ಸತ್ತ ಸರಕಾರದ ಇನ್ನೊಂದು ಕರಾಳಮುಖ ಎನ್ನದೇ ವಿಧಿ ಇಲ್ಲ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಆ ಮಗುವಿನ ತಂದೆ ಕೊನೆಗೂ ಗೆಳೆಯರೊಬ್ಬರಿಂದ ಹಣ ಪಡೆದು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟು ಕಳಿಸಿದ್ದಾರೆ. ಬದಲಿಗೆ ದಂಡದ ರಸೀತಿ ಕೊಟ್ಟು, ಆ ನಂತರ ದಂಡ ಕಟ್ಟಿ ಎಂದು ಪೊಲೀಸರು ಹೇಳಬಹುದಿತ್ತು. ಹಾಗೆ ಮಾಡದೇ ದಂಡಪ್ರಯೋಗದ ಹೆಸರಿನಲ್ಲಿ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಕೂಡಲೇ ಆ ಪೊಲೀಸ್ ಸಿಬ್ಬಂದಿಯ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ವಹಿಸಬೇಕು ಹಾಗೂ ಇಂಥ ಮನಃಸ್ಥಿತಿಯ ಪೊಲೀಸ್ ಸಿಬ್ಬಂದಿಯ ಮನಃಪರಿವರ್ತನೆ ಮಾಡಬೇಕು. ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಮುತುವರ್ಜಿ, ಎಚ್ಚರಿಕೆ ವಹಿಸಬೇಕು. ಅಲ್ಲದೆ; ಗೃಹ ಸಚಿವರು ಈ ಬಗ್ಗೆ ಜನರಿಗೆ ಉತ್ತರ ನೀಡಬೇಕಲ್ಲದೆ, ನೊಂದ ದಂಪತಿಗೆ ಸಾಂತ್ವನ ಹೇಳಲೇಬೇಕು. ಇಂಥ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago