ಆಳಂದ: ಎರಡು ದಿನಗಳ ಹಿಂದೆ ಸ್ಥಳೀಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತೆ ಬಾಲಕಿಯ ಮೇಲೆ ದೌರ್ಜನ್ಯ ಎಸಗಿ ಕೊಲೆ ಮಾಡಿದ ಘಟನೆ ಖಂಡಿಸಿ ಪಟ್ಟಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಕೊರಳ್ಳಿ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ನಾಗರಿಕರು ಸೇರಿ ಗುರುವಾರ ಸಂಜೆ ಕ್ಯಾಂಡಲ ಮಾರ್ಚ ನಡೆಸಿ ಮೃತ ಬಾಲಕಿಯ ಆತ್ಮಕ್ಕೆ ಶಾಂತಿಕೋರಿ ಭಾವಪೂರ್ಣ ಶೃದ್ಧಾಂಜಲಿ ಅರ್ಪಿಸಿದರು.
ಪಟ್ಟಣದ ಬಸ್ ನಿಲ್ದಾಣದಿಂದ ಶ್ರೀರಾಮ ಮಾರುಕಟ್ಟೆ, ಪುರಸಭೆ, ರಜ್ವಿರೋಡ ಮಾರ್ಗವಾಗಿ ಬಸ್ ನಿಲ್ದಾಣವರೆಗೆ ನಡೆದ ಕ್ಯಾಂಡಲ್ ಮಾರ್ಚನಲ್ಲಿ ಪ್ರತಿಯೊಬ್ಬರು ದೀಪವನ್ನು ಹಿಡಿದ ಮೌನವಾಗಿ ಹೆಜ್ಜೆಹಾಕುತ್ತಾ ಬಂದು ಬಸ್ ನಿಲ್ದಾಣದ ಮುಂದೆ ಭಾವಪೂರ್ಣ ಶೃದ್ಧಾಂಜಲಿ ಅರ್ಪಪಿಸಿ ಒಂದು ನಿಮಿಷ್ಯ ಮೌನಾಚರಣೆ ಕೈಗೊಂಡರು.
ಈ ಸಂದರ್ಭದಲ್ಲಿ ವೇದಿಕೆಯ ತಾಲೂಕು ಅಧ್ಯಕ್ಷ ನಾಗರಾಜ ಘೋಡಕೆ, ಉಪಾಧ್ಯಕ್ಷ ಸುನೀಲ ಐರೊಡಗಿ, ಸಂಘಟನೆ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಸೀಫ್ ರುದ್ರವಾಡಿ, ಸಿದ್ಧರೂಢ ಸರಸಂಬಿ, ಬಸವರಾಜ ಕೆರೂರ, ನಾಗರಾಜ ಆರ್ಯ, ಬಸವರಾಜ ಘಂಟೆ, ಉಮೇಶ ಸುತಾರ, ರಾಜಕುಮಾರ ಇಕ್ಕಳಕಿ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…