ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ: ನೋಂದಾಯಿಸಿಕೊಳ್ಳಲು ಸೂಚನೆ

ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಅರ್ಹ ಫಲಾನುಭವಿಗಳು ನೋಂದಾಯಿಸಿಕೊಳ್ಳಬೇಕೆಂದು ಕಲಬುರಗಿ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.

ಯಶಸ್ವಿನಿ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆಯಾಗಿದ್ದು, ಈ ಯೋಜನೆಯಡಿ 2022-23ನೇ ಸಾಲಿಗೆ ಅರ್ಹ ಫಲಾನುಭವಿಗಳು ನೋಂದಾಯಿಸಿಕೊಳ್ಳಬೇಕೆಂದು ಸರ್ಕಾರವು ಆದೇಶ ಹೊರಡಿಸಿದೆ. ಅದರಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ, ಪಿಕಾರ್ಡ ಬ್ಯಾಂಕುಗಳ, ಹಾಲು ಉತ್ಪಾದಕರ ಸಹಕಾರ ಸಂಘಗಳ, ಟಿಎಪಿಸಿಎಂಎಸ್‍ಗಳ ಹಾಗೂ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರಡಿ ಅಥವಾ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997 ರಡಿ ಅಥವಾ ಬಹುರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002 ರಡಿ ನೊಂದಾಯಿಸಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘಗಳ ಸದಸ್ಯರು ಮತ್ತು ಗ್ರಾಮೀಣ ಸಹಕಾರ ಸಂಘಗಳ/ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸಂಘಟಿಸಲ್ಪಟ್ಟಿರುವ ಸ್ವ-ಸಹಾಯ ಗುಂಪುಗಳ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಸಹಕಾರ ಸಂಘಗಳಲ್ಲಿ ಸದಸ್ಯರಾಗಿ ಯಶಸ್ವಿನಿ ಯೋಜನೆಯಡಿ ನೋಂದಾಯಿಸುವ ದಿನಾಂಕಕ್ಕೆ 03 ತಿಂಗಳು ಕಳೆದಿರಬೇಕು. ವಯೋಮಿತಿ ನಿರ್ಬಂಧ ಇರುವುದಿಲ್ಲ. ಈ ಯೋಜನೆಯಡಿ ಯಶಸ್ವಿನಿ ಸದಸ್ಯರ ನೋಂದಣಿ ಪ್ರಕ್ರಿಯೆಯು ಈಗಾಗಲೇ 2022ರ ನವೆಂಬರ್ 1 ರಿಂದ ಪ್ರಾರಂಭವಾಗಿದ್ದು, ಈ ಯೋಜನೆಯಡಿ 1650 ಖಾಯಿಲೆಗಳಿಗೆ ಚಿಕಿತ್ಸೆಯನ್ನು ಯಶಸ್ವಿನಿ ಯೋಜನೆಯಡಿ ಅಳವಡಿಸಿಕೊಂಡಿರುವುದರಿಂದ ಸದರಿ ಯೋಜನೆಯ ಫಲಾನುಭವಿಗಳ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿ 5 ಲಕ್ಷ ರೂ.ನಿಗದಿಪಡಿಸಿದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟವರ್ಕ್ ಆಸ್ಪತ್ರೆಯಲ್ಲಿ ನಗದುರಹಿತ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಸದರಿ ಯೋಜನೆಯಡಿ ನೋಂದಾಯಿಸಿ ಪ್ರಯೋಜನೆ ಪಡೆದುಕೊಳ್ಳಬಹುದಾಗಿದೆ.

2022-23ನೇ ಯಶಸ್ವಿನಿ ಯೋಜನೆಯ ಅವಧಿ ದಿನಾಂಕ:01.01.2023 ರಿಂದ 31.12.2023 ರ ವರೆಗೆ ಜಾರಿಯಲ್ಲಿದ್ದು, ಕಲಬುರಗಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸಹಕಾರಿಗಳು ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

4 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

7 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

12 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

12 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

14 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420