ಶಹಾಬಾದ: ಎ.ಐ.ಯು.ಟಿ.ಯು.ಸಿ ಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದ ನಗರದಲ್ಲಿ ಕಟ್ಟಡ ಕಾರ್ಮಿಕರ ಸಮಾವೇಶ ಜರುಗಿತು.
ಎ.ಐ.ಯು.ಟಿ.ಯು.ಸಿ ನ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ ಮಾತನಾಡಿ, ಶಹಾಬಾದನಲ್ಲಿರುವ ಸಾವಿರಾರು ಕಟ್ಟಡ ಕಾರ್ಮಿಕರು ಸಂಘಟಿತರಾಗಿ ಸರಕಾರದಿಂದ ತಮ್ಮ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ಕಾರ್ಮಿಕ ಇಲಾಖೆಯಿಂದ ಹಲವಾರು ಸವಲತ್ತುಗಳನ್ನು ಪಡೆದುಕೊಳ್ಳುವಲ್ಲಿ ನೈಜ ಕಾರ್ಮಿಕರು ದೂರ ಉಳಿಯುತ್ತಿದ್ದಾರೆ. ರಾಜ್ಯ ಸರಕಾರ ಕಟ್ಟಡ ಕಾರ್ಮಿಕರ ನಿಧಿಯಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ. ಅದು ಕಷ್ಟ ಪಟ್ಟು ದುಡಿಯುವ ಕಟ್ಟಡ ಕಾರ್ಮಿಕರಿಗೆ ಅನುಕೂಲಕರವಾಗಬೇಕಾಗಿದೆ. ಇಂದು ನಾವು ನೋಡುತ್ತಿರುವ ಹಲವಾರು ಸಮಸ್ಯೆಗಳನ್ನು ಸಂಘಟಿತರಾಗಿ ಹೋರಾಡಬೇಕಾಗಿದೆ ಎಂದು ನುಡಿದರು.
ಸಮಾವೇಶದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎ.ಐ.ಯು.ಟಿ.ಯು.ಸಿ ಸಂಚಾಲಕರಾದ ರಾಘವೇಂದ್ರ ಎಂ.ಜಿ. ಮಾತನಾಡಿ, ತಾಲೂಕಿನ ಹಳ್ಳಿಗಳಿಂದ ಸಾವಿರಾರು ಕಟ್ಟಡ ಕಾರ್ಮಿಕರು ದಿನಾಲೂ ಕಲಬುರಗಿಗೆ ಹೋಗಿ ದುಡಿದು ಬರುತ್ತಿದ್ದಾರೆ, ಅದರಲ್ಲಿ ಬಹುಸಂಖ್ಯಾತರು ಮಹಿಳೆಯರು ಕಷ್ಟ ಪಟ್ಟು ದುಡಿಯುತ್ತಿದ್ದಾರೆ. ಸರಕಾರದ ಸೌಲಭ್ಯಗಳು ಅವರಿಗೆ ಸಿಗುವಂತೆ ಸಂಘಟನೆಯು ಕಾರ್ಯ ರೂಪಿಸಬೇಕೆಂದರು.
ಕಟ್ಟಡ ಕಾರ್ಮಿಕ ಸಂಘದ ಸಂಚಾಲಕರಾದ ತಿಮ್ಮಯ್ಯ ಬಿ. ಮಾನೆ ರವರು ನಡೆಸಿಕೊಟ್ಟರು. ನಂತರ ಕಟ್ಟಡ ಕಾರ್ಮಿರ ಶಹಾಬಾದ ಸಮಿತಿಯನ್ನು ರಚಿಸಲಾಯಿತುಸದಸ್ಯರಾಗಿ, ಲಕ್ಷ್ಮಣ ದೇವಕರ, ಸುರೇಶ, ಹಣಮಂತ ಡಿ., ನಾಗರಾಜ, ರಾಮು, ಲಕ್ಷ್ಮಣ ದೇವದುರ್ಗಕರ್, ಕಾಳಿಂಗ ಇತರರು ಇದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…