ಕಲಬುರಗಿ,ನ.4: ಕಲ್ಯಾಣ ಕರ್ನಾಟಕ ಕಲ್ಯಾಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ) ಇದರಡಿ ಕಲಬುರಗಿ ನಗರದ ಬಿದ್ದಾಪೂರ ಕಾಲೋನಿಯ ರಾಮಗೋಪಾಲ ಮಾಲು ಲೇಔಟ್ ನಲ್ಲಿ ನಿರ್ಮಿಸಲಾಗಿರುವ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭವು ನ.6 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕೆ.ಕೆ.ಅರ್.ಡಿ.ಬಿ. ಅಧ್ಯಕ್ಷರು ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಕಟ್ಟಡ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ವಿಶೇಷ ಆಹ್ವಾನಿತರಾಗಿ ಶಿರಹಟ್ಟಿ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹಾಗೂ ಮಾಜಿ ಎಂ.ಎಲ್.ಸಿ. ಅಲ್ಲಮಪ್ರಭು ಪಾಟೀಲ ಆಗಮಿಸುವರು.
ಕಲ್ಯಾಣ ಕರ್ನಾಟಕ ಕಲ್ಯಾಣ ಮತ್ತು ಅಭಿವೃದ್ಧಿ ಟ್ರಸ್ಟ್ (ರಿ) ಅಧ್ಯಕ್ಷ ಉಮಾಕಾಂತ ಎ. ಕೂಡಿ ಅಧ್ಯಕ್ಷತೆಯಲ್ಲಿ ವಹಿಸಲಿದ್ದು, ಡಿ.ಡಿ.ಪಿ.ಐ. ಸಕ್ರೆಪ್ಪಗೌಡ ಬಿರಾದಾರ, ದಕ್ಷಿಣ ವಲಯದ ಬಿ.ಇ.ಓ ಶಂಕ್ರೆಮ್ಮ ಡವಳಗಿ, ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧೀಕ್ಷಕ ಅಭಿಯಂತ ಶಿವಶಂಕರ ಗುರಗುಂಟಿ, ನಿವೃತ್ತ ಹೆಚ್ಚುವರಿ ಎಸ್.ಪಿ. ಬೆಳ್ಳಪ್ಪ ಎಸ್. ಮರತೂರಕರ್ ಅವರು ಅತಿಥಿಗಳಾಗಿ ಆಗಮಿಸುವರು.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…