ಬೀದರ್: ಭೀಕರ ಅಪಘಾತ | ಐವರು ಮೃತ್ಯು, 8 ಮಂದಿಗೆ ಗಾಯ

0
260

ಬೀದರ್ : ಐಶರ್ ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಊರಿನ ಐವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ನಡೆದಿದೆ.

ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಸಾವೀಗೀಡಾದ ದುರ್ದೈವಿಗಳಾಗಿದ್ದಾರೆ.

Contact Your\'s Advertisement; 9902492681

ಇನ್ನು ಅಪಘಾತದಲ್ಲಿ 8 ಜನ‌ ಗಾಯಾಳುಗಳನ್ನು ಬೀದರ್ ಹಾಗೂ ಮನ್ನಾಖೇಳ್ಳಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗಿದೆ.

ಮೃತರು ಉಡಮನಳ್ಳಿ ಗ್ರಾಮಸ್ಥರು ಮೃತಪಟ್ಟ 5 ಮಹಿಳೆಯರು 8 ಜನ‌ ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರಾಗಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಈ ಸಂಬಂಧ ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here