ಸುರಪುರ : ನ್ಯಾಯಾಲಯಗಳಲ್ಲಿನ ಕೆಲವು ಪ್ರಕರಣಗಳು ಇದೇ ತಿಂಗಳು 12 ರಂದು ನ್ಯಾಯಾಲಯದಲ್ಲಿ ನಡೆಯಲಿರುವ ರಾಷ್ಟ್ರೀಯ ಬೃಹತ್ ಲೋಕ್ ಅದಲತ್ತನಲ್ಲಿ ಪ್ರಕರಣಗಳು ಇತ್ಯರ್ಥ ಪಡಿಸಿಕೊಳ್ಳಬಹುದೆಂದು ನ್ಯಾಯವಾದಿಗಳಾದ ಚೆನ್ನಪ್ಪ ಹೂಗಾರ ಹೇಳಿದರು.
ತಾಲೂಕಿನ ಕಚಕನೂರ ಬೈಚಬಾಳ ಗ್ರಾಮ ಪಂಚಾಯತ ಕಾರ್ಯಾಲಯಗಳಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಸುರಪುರ ನ್ಯಾಯವಾದಿಗಳ ಸಂಘ ಸುರಪುರ ಮತ್ತು ಸರ್ಕಾರಿ ವಿವಿಧ ಇಲಾಖೆಗಳ ಸಯೋಗದಲ್ಲಿ ಕಾನೂನು ಅರಿವು ಮೂಡಿಸುವ ಮೂಲಕ ನಾಗರಿಕ ಸಬಲೀಕರಣ ಕಾರ್ಯಕ್ರಮವನ್ನು ಉದ್ದೇಶಿಸಿ ಉಪನ್ಯಾಸಕರಾಗಿ ಮಾತನಾಡಿ, ಇಂದು ಎಲ್ಲರಿಗೂ ಕಾನೂನಿನ ಕುರಿತು ಮಾಹಿತಿ ನೀಡಲೆಂದು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಗುತ್ತಿದ್ದು,ತಾವೆಲ್ಲರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜನ ಸಾಮಾನ್ಯರು ತಿಳಿಯ ಬೇಕಾದ ಕಾನೂನುಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌಡಪ್ಪಗೌಡ ಚಿಕ್ಕನಳ್ಳಿ ನ್ಯಾಯವಾದಿಗಳಾದ ಸಚಿನ್ , ಮಲ್ಲು ತಳ್ಳಳ್ಳಿ ಮಾತನಾಡಿದರು.ಮುಖಂಡರಾದ ಭೀಮಣ್ಣ ದೊರೆ ದಶರಥ ದೊರಿ ಗ್ರಾಮ ಪಂಚಾಯತ ಕಾರ್ಯದರ್ಶಿ ಯಂಕನಗೌಡ ವೇದಿಕೆ ಮೇಲಿದ್ದರು. ಗ್ರಾಮ ಪಂಚಾಯತ್ ಕರ ವಸೂಲಿಗಾರರಾದ ಯಲ್ಲಪ್ಪ ಅರಕೇರಿ ಸ್ವಾಗತಿಸಿದರು. ಹಣಮಂತ್ರಾಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ ಸದಸ್ಯರು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…