ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ಶನಿವಾರದಂದು ಶರಣಬಸವ ವಿಶ್ವವಿದ್ಯಾಲಯದ ಆ್ಯಂಟಿ ರ್ಯಾಗಿಂಗ್ ಸೆಲ್, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕ ಹಾಗೂ ಲೋಕಾಯುಕ್ತ ಕಲಬುರಗಿ ಸಹಯೋಗದೊಂದಿಗೆ ಭೃಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಜರುಗಿತು.
ಲೋಕಾಯುಕ್ತ ಎಸ್‍ಪಿ ಎ ಆರ್ ಕರ್ನೂಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸರ್ಕಾರದ ಆದೇಶದಂತೆ ಈ ಸಪ್ತಾಹ ಕಾರ್ಯಕ್ರಮವು ಎಲ್ಲಾ ಜಿಲ್ಲೆ ಮತ್ತು ತಾಲೂಕಗಳಲ್ಲಿ ಆಯೋಜಿಸಲಾಗಿದೆ. 1984ರಲ್ಲಿ ಸ್ಥಾಪನೆಗೊಂಡ ಲೋಕಾಯುಕ್ತ ಸಂಸ್ಥೆಯು ಭೃಷ್ಟರ ವಿರುದ್ಧ ಸಮರ ಸಾರಿದೆ. ಅಧಿಕಾರದ ದುರುಪಯೋಗ ಪಡಿಸಿಕೊಂಡು ಹಣ ಅಥವಾ ಯಾವುದೇ ರೀತಿಯ ಉಡುಗೊರೆ ಮತ್ತು ಮಧ್ಯವರ್ತಿಯಾಗಿ ಹಣ ಪಡೆಯುವುದು ಕೂಡಾ ಭೃಷ್ಠಾಚಾರ ಎನಿಸುತ್ತದೆ. ಇಂದಿನ ದಿನಗಳಲ್ಲಿ ಭೃಷ್ಟಾಚಾರವು ಒಂದು ಸಾಮಾಜಿಕ ಪಿಡುಗಾಗಿದೆ ಇದು ದೇಶದ ಆರ್ಥಿಕತೆಯ ಮೇಲೆ ಹಾಗೂ ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಭೃಷ್ಟಾಚಾರ ನಿರ್ಮೂಲನೆಗಾಗಿ ಯುವ ಪೀಳಿಗೆ ಮುಂದೆ ಬರಬೇಕೆಂದು ಕರೆ ನೀಡಿದರು.
ಭೃಷ್ಟಾಚಾರ ಇಂದಿನ ದಿನಗಳಲ್ಲಿ ಎಲ್ಲಾ ರಂಗಗಳಲ್ಲಿಯೂ ತಾಂಡವವಾಡುತ್ತಿದೆ. ವಿದ್ಯಾರ್ಥಿಗಳು, ಹಾಗೂ ಸಾರ್ವಜನಿಕರು ಇದರ ನಿರ್ಮೂಲನೆಗೆ ಕೈಜೊಡಿಸಬೇಕೆಂದರು. ಎಲ್ಲರಲ್ಲಿಂದು ನೈತಿಕ ಮೌಲ್ಯ ಕುಸಿಯುತ್ತಿದೆ. ನಮ್ಮಲ್ಲಿ ನ್ಯಾಯ ಬಡವರ ಬಗ್ಗೆ ಕಾಳಜಿ ಹಾಗೂ ಬೇರೆಯವರ ಬಗ್ಗೆ ಅನುಕಂಪ ಇರಬೇಕು. ಎಲ್ಲರೂ ಸಮಾನವೆಂಬ ಭಾವನೆ ಇರಬೇಕು ಹಾಗೂ ಇದನ್ನು ನಾವು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶಿಕ್ಷಣ ದಾಸೋಹ ಮಾಡುವುದು ಒಂದು ಸಾಮಾಜಿಕ ಕಾರ್ಯ ಇದನ್ನು ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರು ಈ ಭಾಗದ ಜನರಿಗೆ ಸುಶಿಕ್ಷಿತರನ್ನಾಗಿ ಮಾಡುತ್ತಿರುವುದು ಶ್ಲಾಘನೀಯ ಎಂದು ಕೊಂಡಾಡಿದರು.
ಲೋಕಾಯುಕ್ತ ಡಿಎಸ್‍ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ ಮಾತನಾಡಿ ಅಕ್ಟೋಬರ್ 31ನೇ ತಾರೀಖಿನಿಂದ ಭೃಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಆರಂಭವಾಗಿದೆ ಎಂದು ತಿಳಿಸಿದ ಅವರು ಭೃಷ್ಟಾಚಾರ ನಿರ್ಮೂಲನೆಗೆ ಸಂಘ ಸಂಸ್ಥೆಗಳು ಯುವಕರು ಹಾಗೂ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯವಾಗಿದೆ. ದುರಾಸೆಯು ಮಾನವನ ದೌರ್ಬಲ್ಯ, ಇದರಿಂದ ಭೃಷ್ಟಾಚಾರ ಹೆಚ್ಚಾಗಿದೆ. ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರು ಅಡ್ಡದಾರಿ ಹಿಡಿದರೆ ಲೋಕಾಯುಕ್ತ ಕ್ರಮ ವಹಿಸುತ್ತದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಲೋಕಾಯುಕ್ತ ಡಿಎಸ್‍ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ, ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದಕ್ಕೆ ಭೃಷ್ಟಾಚಾರದ ವಿರುದ್ಧ ಪ್ರತಿಜ್ಞಾವಿಧಿ ಭೋಧಿಸಿದರು.
ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ ವೇದಿಕೆ ಮೇಲಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಶೀತಲ್ ಪ್ರಾರ್ಥಿಸಿದರೆ, ಪ್ರೊ. ರೇಣುಕಾ ಮತ್ತು ಪ್ರೊ. ಸುನೀತಾ ನಿರೂಪಿಸಿದರು. ಶರಣಬಸವ ವಿಶ್ವವಿದ್ಯಾಲಯದ ಸಮಕುಲಪತಿ ಪ್ರೊ. ವಿ. ಡಿ. ಮೈತ್ರಿ ಸ್ವಾಗತಿಸಿದರು. ಡಾ. ಶಿವಕುಮಾರ ಜವಳಗಿ ವಂದಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…