ಬಿಸಿ ಬಿಸಿ ಸುದ್ದಿ

ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ತುಂಬಾ ಒಳ್ಳೇಯದು: ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರಕರದ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ಧತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ನಗರದಲ್ಲಿ ಪ್ರತಿಕ್ರಿಯಿಸಿ ಮಾತನಾಡಿ ಇದರಿಂದ ಮುಂದಿನ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ತುಂಬಾ ಒಳ್ಳೇಯದು ಎಂದು ಹೇಳಿದ್ದಾರೆ.

ಈ ಬಗ್ಗೆ ರಾಮನಗರದ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಜಮ್ಮು-ಕಾಶ್ಮೀರದಲ್ಲಿನ 370 ವಿಧಿ ಹಾಗೂ 35ಎ ವಿಧಿ ರದ್ದು ವಿಚಾರವಾಗಿ ಪರ ವಿರೋಧ. ಎರಡು ಇದೆ. ಹೆಚ್ಚಿನ ರೀತಿಯಲ್ಲಿ ಇದು ಆಗಬೇಕು ಎಂಬ ಭಾವನೆಯನ್ನು ವ್ಯಕ್ತಪಡಿಸಿದ್ದನ್ನು‌ ಗಮನಿಸಿದ್ದೇನೆ. ಇದರಿಂದ ಮುಂದಿನ ದಿನಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕರೆ ತುಂಬಾ ಒಳ್ಳೇಯದು ಎಂದರು.

ಹಾಗೆಯೇ ಜನರು ಸಮಾಜ‌ ಶಾಂತಿಯಿಂದ ಬದುಕಬೇಕು. ಈ ನಿಟ್ಟಿನಲ್ಲಿ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಂಡು ಯಾವುದೇ ಅಶಾಂತಿಗೆ ಅವಕಾಶ ಮಾಡಿಕೊಡದೇ ಉತ್ತಮ‌ ರೀತಿಯಲ್ಲಿ ಹೋಗುವ ಮೂಲಕ ಅಂತಿಮ ಪರಿಹಾರ ದೊರಕಬೇಕು. ಜನರ ಭಾವನೆಗಳಿಗೆ ನಾವು ಒಮ್ಮತದ ಒಪ್ಪಿಗೆ ಕೊಡಬೇಕು ಎಂದು ತಿಳಿಸಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago