ಕಲಬುರಗಿ: ಪ್ರಸಕ್ತ 2022ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯು (ಟಿ.ಇ.ಟಿ) ನವೆಂಬರ್ 6 ರಂದು ರವಿವಾರ ಕಲಬುರಗಿ ನಗರದ 62 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಪ್ರದೇಶದ ಸುತ್ತಮತ್ತ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ರನ್ವಯ ನಿμÉೀಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಕಲಬುರಗಿ ಡಿ.ಡಿ.ಪಿ.ಐ. ಸಕ್ರೆಪ್ಪಗೌಡ ಬಿರಾದಾರ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಪರೀಕ್ಷಾ ಕೇಂದ್ರದಲ್ಲಿ ತರುವುದನ್ನು, ಶೂ ಮತ್ತು ಬೆಲ್ಟ್ ಧರಿಸಿ ಬರುವುದನ್ನು ಸಹ ನಿμÉೀಧಿಸಲಾಗಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ತಿಳಿಸಿದೆ.
ಅಧಿವೇಶನ-1 ಪತ್ರಿಕೆ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ 46 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಅಧಿವೇಶನ-2 ಪತ್ರಿಕೆ ಮಧ್ಯಾಹ್ನ 2 ರಿಂದ ಸಾಯಂಕಾಲ 4.30 ಗಂಟೆಯವರೆಗೆ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 16,984 ಜನ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ ಅಥವಾ ಸಹಿ ಮತ್ತು ಭಾವಚಿತ್ರ ವ್ಯತ್ಯಾಸ ಕಂಡುಬಂದಲ್ಲಿ ಅಭ್ಯರ್ಥಿಗಳು ತಮ್ಮೊಂದಿಗೆ ಆನ್‍ಲೈನ್ ಅರ್ಜಿ, ಇತ್ತೀಚಿನ ಭಾವಚಿತ್ರ ಮತ್ತು ಆಧಾರ ಕಾರ್ಡ್ ಅಥವಾ ಮತ್ತಿತರ ಅಧಿಕೃತ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ಕಡ್ಡಾಯವಾಗಿ ತೋರಿಸಿ ಪ್ರವೇಶ ಒಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರದ ವಿಳಾಸದ ಕುರಿತು ಸ್ಪಷ್ಟನೆ: ಪ್ರವೇಶ ಪತ್ರದಲ್ಲಿ ಕೆಲವೊಂದು ಕೇಂದ್ರಗಳ ವಿಳಾಸ ಅಪೂರ್ಣವಾಗಿ ನಮೂದಾಗಿದ್ದರಿಂದ ಡಿ.ಡಿ.ಪಿ.ಐ. ಅವರು ವಿಳಾಸದ ಕುರಿತು ಸ್ಪಷ್ಟನೆ ನೀಡಿದ್ದು, ಕಲಬುರಗಿ ನಗರದ ಪರೀಕ್ಷಾ ಕೇಂದ್ರ ಸಂಖ್ಯೆ 34 ರ ಸರಿಯಾದ ವಿಳಾಸ ಸರ್ವಜ್ಞ ಪ್ರೌಢಶಾಲೆ ಸಾಯಿ ಮಂದಿರ ರಸ್ತೆ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 47ರ ಸರಿಯಾದ ವಿಳಾಸ ಸಂಗಮ ಪ್ರೌಢಶಾಲೆ ಮಹಾಲಕ್ಷ್ಮೀ ಲೇ-ಔಟ್ (ನಾರಾಯಣದಾಸ್ ಆಯಿಲ್ ಮಿಲ್ ಕಾಂಪೌಂಡ್) ಹುಮನಾಬಾದ ರಿಂಗ್ ರೋಡ ಕಲಬುರಗಿ-585104, ಪರೀಕ್ಷಾ ಕೇಂದ್ರ ಸಂಖ್ಯೆ 49ರ ಸರಿಯಾದ ವಿಳಾಸ ನ್ಯಾಷನಲ್ ಉರ್ದು ಬಾಲಕರ ಪ್ರೌಢ ಶಾಲೆ ಹಫ್ತ ಗುಂಬಜ ಕಲಬುರಗಿ, ಪರೀಕ್ಷಾ ಕೇಂದ್ರ ಸಂಖ್ಯೆ 50ರ ಸರಿಯಾದ ವಿಳಾಸ ನ್ಯಾಷನಲ್ ಪದವಿ ಪೂರ್ವ ಕಾಲೇಜು ಹಫ್ತ ಗುಂಬಜ ಕಲಬುರಗಿ ಹಾಗೂ ಪರೀಕ್ಷಾ ಕೇಂದ್ರ ಸಂಖ್ಯೆ 62ರ ಸರಿಯಾದ ವಿಳಾಸ ನ್ಯೂಟನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪಟೇಲ್ ಕಾಲೋನಿ ಎಂ.ಎಸ್.ಕೆ.ಮಿಲ್ ರಸ್ತೆ ಜಾಫರಾಬಾದ ಕಲಬುರಗಿ ಆಗಿದ್ದು, ಪರೀಕ್ಷಾರ್ಥಿಗಳು ಇದನ್ನು ಗಮನಿಸಲು ಕೋರಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…