ಕಲಬುರಗಿ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪ್ರಾದೇಶಿಕ ಕಾರ್ಯಾಲಯ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡ ಬಳಗ (ನೋo), ಘಟಕದ ಸಂಯುಕ್ತ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ KAS, ಅಧೀನ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ, ಮತ್ತು ಸಾಂಸ್ಕೃತಿಕ ಸಂಘ (KKHRA&CA) ಮಲ್ಲಿಕಾರ್ಜುನ ರೆಡ್ಡಿ ಪಾಟೀಲ್ ಮಾತನಾಡಿ, ಕನ್ನಡ ಭಾಷಾ ಅನುಷ್ಠಾನ ಹಾಗೂ ಬೆಳವಣಿಗೆಯಲ್ಲಿ ನಮ್ಮೆಲ್ಲರ ಕರ್ತವ್ಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಖ್ಯಾತ ಹಾಸ್ಯಗಾರ ಗುಂಡಣ್ಣ ಡಿಗ್ಗಿ (ಆರೋಗ್ಯ ಇಲಾಖೆ) ಇವರು ಭಾಗವಹಿಸಿ ಜನರನ್ನು ರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಯೂನಿಯನ್ ಬ್ಯಾಂಕ್ ನ ಪ್ರಾದೇಶಿಕ ಮುಖ್ಯಸ್ಥರಾದ ಅರವಿಂದ್ ಹೆಗಡೆ ಅವರು ಮಾತನಾಡಿ ಬ್ಯಾಂಕಿನಲ್ಲಿ ಗ್ರಾಹಕರ ಜೊತೆಗೆ ವ್ಯವಹಾರವನ್ನು ಕನ್ನಡದಲ್ಲಿಯೇ ಮಾಡಿದರೆ ಆಗ ಮಾತ್ರ ಗ್ರಾಹಕರ ಜೊತೆಗೆ ನಾವು ಹೆಚ್ಚು ಹೆಚ್ಚು ಬೆರೆಯುವಂತಾಗುತ್ತದೆ, ಅದರಿಂದ ಬ್ಯಾಂಕಿನ ವ್ಯವಹಾರವೂ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಸತೀಶ್ ಜೋಶಿ ನಿರೂಪಿಸಿದರೆ ಚಂದ್ರಮೋಹನ ವಂದಿಸಿದರು. ಕಾರ್ಯಕ್ರಮ ದಲ್ಲಿ ಬ್ಯಾಂಕಿನ ಸಹೋದ್ಯೋಗಿ & ಕುಟುಂಬ ವರ್ಗದವರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…