ಬಿಸಿ ಬಿಸಿ ಸುದ್ದಿ

ಸುರಪುರ: ಕನಕದಾಸರ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

ಸುರಪುರ : ಕನಕದಾಸರ ಜಯಂತಿ ಅಂಗವಾಗಿ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿ,ನ.11ಕ್ಕೆ ಆಚರಿಸಲಾಗುವುದು. ಅಂದು ಬೆಳಗ್ಗೆ 9 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ವಾಲ್ಮೀಕಿ ಭವನದವರೆಗೂ ಕನಕದಾಸರ ಭಾವಚಿತ್ರದ ಮೆರವಣಿಗೆ ಜರುಗಲಿದೆ,ನಂತರ ಬೆಳಗ್ಗೆ 11 ಗಂಟೆಗೆ ವಾಲ್ಮೀಕಿ ಭವನದಲ್ಲಿ ಜಯಂತಿ ಆಚರಿಸಲಾಗುವುದು. ಉಪನ್ಯಾಸಕರು ಕನಕದಾಸರ ಕುರಿತು ಉಪನ್ಯಾಸ ನೀಡುವರು ಎಂದರು.

ಎಲ್ಲ ಸರಕಾರಿ ಇಲಾಖೆ, ಶಾಲಾ-ಕಾಲೇಜು, ಗ್ರಾಪಂ, ಅಂಗನವಾಡಿ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು.ಕನಕ ವೃತ್ತಗಳಿಗೆ ದೀಪಲಾಂಕರ ಮಾಡಬೇಕು.ತಾಲೂಕಾಡಳಿತ ಹಮ್ಮಿಕೊಂಡಿರುವ ಜಯಂತಿಯಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಭಾಗವಹಿಸಬೇಕು ಎಂದು ಹೇಳಿದರು.

ಟಿಹೆಚ್‍ಒ ಡಾ.ಆರ್.ವಿ.ನಾಯಕ ವೇದಿಕೆಯಲ್ಲಿದ್ದರು. ಕುರುಬ ಸಮಾಜದ ಮುಖಂಡರಾದ ಕಾಳಪ್ಪ ಕವಾತಿ, ಭೀಮರಾಯ ಮೂಲಿಮನಿ, ರಂಗನಗೌಡ ದೇವಿಕೇರಿ, ನಿಂಗರಾಜ್ ಬಾಚಿಮಟ್ಟಿ, ನಿಂಗಣ್ಣ ಬೂದಗುಂಪಿ, ಮಲ್ಲು ದಂಡಿನ್, ರವಿಚಂದ್ರ ಸಾಹುಕಾರ ಆಲ್ದಾಳ, ಜುಮ್ಮಣ್ಣ ಏಳುರೊಟ್ಟಿ, ಕೃಷ್ಣಾ ಬಾದ್ಯಾಪುರ, ವಿಜಯಕುಮಾರ ಮಂಗೀಹಾಳ, ಮಲ್ಲಣ್ಣ ಐಕೂರು, ಮಾಳಪ್ಪ ಮಾಲಹಳ್ಳಿ, ಕೆಂಚಪ್ಪ ಪೂಜಾರಿ, ನಿಂಗಣ್ಣ ಕಾಡ್ಲೂರು , ಮಾರ್ಥಂಡಪ್ಪ ಮಗ್ಗದ, ಮಲ್ಲಣ್ಣ ಹುಬ್ಬಳ್ಳಿ , ಭೀಮಣ್ಣ ಕೆಂಗೂರಿ , ಬೀರಲಿಂಗ ಬಾದ್ಯಾಪುರ, ಸಿದ್ರಾಮ ಎಲಿಗಾರ, ಚಂದ್ರ ದನಕಾಯಿ ಸೇರಿ ಅನೇಕರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

2 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

2 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

4 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

4 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

4 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

4 hours ago