ಕಲಬುರಗಿ: ಜಿಲ್ಲೆಯಲ್ಲಿರುವ ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲು ಮತ್ತು ಸಲಹೆಗಳನ್ನು ಸಂಗ್ರಹಿಸಲು ನವೆಂಬರ್ ಕೊನೆ ವಾರದಲ್ಲಿ ತಜ್ಞರ ಸಭೆ ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಲಬುರಗಿ ಜಿಲ್ಲೆಯಲ್ಲಿ ಅನೇಕ ಅಣೆಕಟ್ಟುಗಳು ಇವೆ.ಅವುಗಳಲ್ಲಿ ಅಧೀಕ ಪ್ರಮಾಣದಲ್ಲಿ ನೀರು ಸಂಗ್ರಹವಿದ್ದರೂ ಕಾಲುವೆಗಳಲ್ಲಿ ನೀರು ಹರಿದು ಬರುತ್ತಿಲ್ಲ.ಇದಕ್ಕೆ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಅವೈಜ್ಞಾನಿಕ ಪ್ರಮುಖ ಕಾರಣವಾಗಿದೆ.ಮಧ್ಯಮ ನೀರಾವರಿ ಯೋಜನೆಯಾದ ಬೆಣ್ಣೆತೊರಾ ಅಣೆಕಟ್ಟಿನಿಂದ ರೈತರ ಕೃಷಿ ಜಮೀನುಗಳಿಗೆ ನೀರು ಸರಬರಾಜು ಆಗುತ್ತಿಲ್ಲ.ಇದರ ಕಾಲುವೆ ನಿರ್ಮಾಣದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ.
ಅದೇ ರೀತಿ ಗಂಡೋರಿ ನಾಲಾದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.ಅಮರ್ಜಾ, ಭೀಮಾ, ಮುಲ್ಲಾಮಾರಿ, ಕಾಗೀಣಾನದಂಥ ನದಿಗಳ ನೀರು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗುತ್ತಿಲ್ಲ.ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಂ ಮಾತ್ರ ಸ್ವಲ್ಪ ಪ್ರಮಾಣದಲ್ಲಿ ರೈತರಿಗೆ ಅನುಕೂಲವಾಗಿದೆ.ಆದರೆ ಉಳಿದಂತೆ ಕೇವಲ ಹೆಸರಿಗೆ ಮಾತ್ರ ಇರುವುದು ದುರದೃಷ್ಟಕರ ಎಂದು ಖೇದ ವ್ಯಕ್ತ ಪಡಿಸಿದ್ದಾರೆ.
ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಅಣೆಕಟ್ಟುಗಳು ರೈತರಿಗೆ ಉಪಯೋಗಕ್ಕೆ ಬಾರದಾಗಿವೆ.ತೊಗರಿ,ಬಾಳೆ, ಕಬ್ಬು ಸೇರಿದಂತೆ ಹಲವು ವಾಣಿಜ್ಯ ಬೆಳೆಗಳು ಬೆಳೆಯಲಾಗುತ್ತಿದೆ.ಆದರೆ ಕೃಷಿ ಭೂಮಿಗೆ ನೀರು ಹರಿಸಲಾಗುತ್ತಿಲ್ಲ.ನೀರಾವರಿ ಆಗಬೇಕಾಗಿದ್ದ ಸಾವಿರಾರು ಹೆಕ್ಟೇರ್ ಭೂಮಿಗಳು ಇಂದಿಗೂ ಒಣ ಬೇಸಾಯ (ಖುಷ್ಕಿ) ಆಗಿವೆ.ಹೊಸ ಕಾಲುವೆಗಳ ನಿರ್ಮಾಣ ಮಾಡಲು ಸರಕಾರ ಮೀನಮೇಷ ಎಣಿಸುತ್ತಿದೆ.
ಕುಡಿಯುವ ನೀರಿನ ಅನುಷ್ಠಾನಕ್ಕೆ ಕಾಗಿಣಾ ನದಿಯ 10 ಏತ ನೀರಾವರಿ ಯೋಜನೆಗಳ ಕಾಮಗಾರಿ ಕೈಗೊಳ್ಳಲು ಈ ಹಿಂದೆ ಯಡಿಯೂರಪ್ಪ ಸರ್ಕಾರ ಭರವಸೆ ನೀಡಿತ್ತು. ಇನ್ನೂ ವರೆಗೆ ಅನುಷ್ಠಾನಕ್ಕೆ ಬಂದಿಲ್ಲ.ಅದರಂತೆ ಭೀಮಾ ಏತ ನೀರಾವರಿ ಯೋಜನೆ ಕೂಡ ವಿಳಂಬವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕೂಡಲೇ ಸರ್ಕಾರ ತಜ್ಞರ ಸಮಿತಿ ರಚಿಸಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಬೇಕು.ಕಾಲುವೆಗಳ ಆಧುನೀಕರಣ, ಹೊಸ ಕಾಲುವೆಗಳ ನಿರ್ಮಾಣ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಭೆಯಲ್ಲಿ ಜಿಲ್ಲೆಯ ವಿವಿಧ ತಜ್ಞರ ಜೊತೆ ಸಮಾಲೋಚನೆ ನಡೆಸಿ ನಂತರ ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…