ತೈಲ ಟ್ಯಾಂಕರ್-ಲಾರಿ ಡಿಕ್ಕಿ: ಚಾಲಕ ಸಾವು

0
114

ವಾಡಿ: ಡಿಸೇಲ್ ಟ್ಯಾಂಕರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒರ್ವ ಮೃತಪಟ್ಟ ಘಟನೆ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಅಪಘಾತದಲ್ಲಿ ಇಂಡಿಯನ್ ಆಯಿಲ್ ಕಂಪನಿಯ ಡಿಸೇಲ್ ಟ್ಯಾಂಕರ್ ಚಾಲಕ ಚಂದ್ರಕಾಂತ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈರುಳ್ಳಿ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ಇನ್ನೋರ್ವನಿಗೆ ತೀವ್ರತರದ ಗಾಯಣಗಳಾಗಿವೆ ಎನ್ನಲಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Contact Your\'s Advertisement; 9902492681

ಲಾರಿ ನಜ್ಜುಗುಜ್ಜಾಗಿದ್ದು, ಡಿಸೇಲ್ ಟ್ಯಾಂಕರ್ ವಾಹನ ಹೆದ್ದಾರಿ ಪಕ್ಕದ ಹೊಲಕ್ಕೆ ಬಿದ್ದಿದೆ. ಸ್ಥಳಕ್ಕೆ ವಾಡಿ ಠಾಣೆ ಪಿಎಸ್ ಐ ಮಹಾಂತೇಶ ಜಿ.ಪಾಟೀಲ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here