ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಕೊಳ್ಳುರ್ ಕೃಷ್ಣಾ ನದಿಗೆ ನಿರ್ಮಾಣ ಮಾಡಿರುವ ಸೇತುವೆಗೆ ರವಿವಾರ ಶಾಸಕ ವೆಂಕಟರೆಡ್ಡಿ ಮುದ್ನಾಳ ಭೇಟಿ ನೀಡಿ ನದಿಯ ಪ್ರವಾಹವನ್ನು ವಿಕ್ಷೀಸಿದರು.
ಕೊಳ್ಳುರ್ ಸೇತುವೆ ಮೇಲೆ ಇರುವ ತಗ್ಗು ಗುಂಡೆಗಳನ್ನು ಗಮನಿಸಿ ಶಾಸಕರು ಕೆಬಿಜೆಎನ್ಎಲ್ ಅಧಿಕಾರಿಗಳು ಸೇತುವೆಗೆ ಬಂದಾಗ ನೀವು ಏನು ನೋಡುತ್ತಿರಿ ಏನು ಕೆಲಸ ಮಾಡುತ್ತಿರಿ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸೇತುವೆ ಸುರಕ್ಷತೆವಾಗಿ ಕಾಮಗಾರಿ ಕೈಗೊಳ್ಳಿ ಎಂದು ಸೂಚಿಸಿದರು.
ನಂತರ ಶಾಸಕರು ನದಿ ತೀರದ ಗ್ರಾಮಗಳಾದ ಕೊಳ್ಳುರ್, ಟೊನ್ನೂರು, ಮರಕಲ್, ಯಕ್ಷಂತಿ, ತುಮಕೂರ್ ಗ್ರಾಮಗಳಿಗೆ ಭೇಟಿ ನೀಡಿ ಕೃಷ್ಣಾ ನದಿ ಪ್ರವಾಹದಿಂದ ರೈತರ ಜಮೀನುಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿರುವುದರಿಂದ ಬೆಳೆ ನಾಶ ವಾಗಿರುವುದನ್ನು ವಿಕ್ಷೀಸಿ ರೈತರಿಂದ ಮಾಹಿತಿ ಪಡೆದು ಸ್ಥಳದಲ್ಲಿಯೇ ಇದ್ದ ಕಂದಾಯ ಅಧಿಕಾರಿಗಳಿಗೆ ಬೆಳೆ ಹಾನಿ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನೀಡಲು ಸೂಚಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಈಗಾಗಲೇ ಕೃಷ್ಣಾ ನದಿ ಪ್ರವಾಹ ನಿರೀಕ್ಷೆಗೆ ಮೀರಿ ಅಪಾರ ಮಟ್ಟದಲ್ಲಿ ಕಾಣುತ್ತಿದ್ದೇವೆ ಇದರಿಂದ ಹಲವಾರು ಗ್ರಾಮಗಳ ರೈತರ ಬೆಳೆಗಳು ನೀರಿನಲ್ಲಿ ಮುಳುಗಿವೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗುವ ಸಂಭವವಿದೆ. ಈ ಭಾಗದಲ್ಲಿ ಜನರಿಗಾಗಿ ಗಂಜಿ ಕೇಂದ್ರವನ್ನು ತೆರೆಯಲು ಕ್ರಮ ಕೈಗೊಳ್ಳಬೇಕೆಂದು ನಾನು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಮನವಿ ಮಾಡುತ್ತೇನೆ ಎಂದು ತಿಳಿಸಿದರು.
15 ದಿನಗಳ ನಂತರ ಕಂದಾಯ ಅಧಿಕಾರಿಗಳು ಬೆಳೆ ಹಾನಿ ಸಮಗ್ರ ಮಾಹಿತಿ ನೀಡಿದ ಮೇಲೆ ನಾನೇ ಖುದ್ದಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರೈತರಿಗೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸರೆಡ್ಡಿ ಪಾಟೀಲ್ ಚನ್ನೂರ್, ಸಿದ್ದಣಗೌಡ ಕಾಡಂನೋರ್, ಚಂದ್ರಶೇಖರ ಮರಕಲ್, ಚನ್ನಾರೆಡ್ಡಿ ಮದರಕಲ್, ಶಾಂತಪ್ಪ ಗೊಂದೆನೂರ್, ಹಣಮಂತ ಇಟಗಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…