ಧರ್ಮಾಪೂರದಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದ ಜಿಲ್ಲಾ ಚುನಾವಣಾಧಿಕಾರಿ

0
23

ಕಲಬುರಗಿ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಅಂಗವಾಗಿ 01-01-2023 ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಬುಧವಾರ ಕರಡು ಮತದಾರರ ಪಟ್ಟಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು, ಸಾಂಕೇತಿಕವಾಗಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಯಶವಂತ ವಿ. ಗುರುಕರ್ ಅವರು ಗುಲಬರ್ಗಾ ಗ್ರಾಮೀಣ ವಿಧಾನಸಬಾ ಕ್ಷೇತ್ರದ ಧರ್ಮಾಪೂರ ಮತಗಟ್ಟೆ ಸಂಖ್ಯೆ 226ರಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಮತಗಟ್ಟೆಯಲ್ಲಿ 854 ಜನರು ಮತ ಚಲಾಯಿಸಲು ಅರ್ಹರಿದ್ದು, ಅವರ ಪಟ್ಟಿ ಇಂದಿಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಗೆ ಏನಾದರು ಆಕ್ಷೇಪಣೆಗಳಿದಲ್ಲಿ ಡಿಸೆಂಬರ್ 8ರ ವರೆಗೆ ಇಲ್ಲಿನ ಬಿ.ಎಲ್.ಓ. ಗಳಿಗೆ ಸಲ್ಲಿಸಬೇಕು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಡಿಸೆಂಬರ್ 26 ರೊಳಗೆ ವಿಲೇವಾರಿ ಮಾಡಲಾಗುತ್ತದೆ ಎಂದು ನೆರೆದ ಸಾರ್ವಜನಿಕರಿಗೆ ಹೇಳಿದರು.

Contact Your\'s Advertisement; 9902492681

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ನಮೂನೆ 6ರಲ್ಲಿ, ಯಾರಾದರು ನಿಧನ ಹೊಂದಿದಲ್ಲಿ ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಮೂನೆ 7 ಹಾಗೂ ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಮತ್ತೊಂದು ಮತಕ್ಷೇತ್ರಕ್ಕೆ ವರ್ಗಾವಣೆಗೆ ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬೇಕು. ವಿಶೇಷವಾಗಿ ಯುವ ಮತದಾರರು 18 ವರ್ಷ ತುಂಬಿಲ್ಲದಿದ್ದರು, ಅರ್ಜಿ ಸಲ್ಲಿಸಿದಲ್ಲಿ 18 ವರ್ಷ ನಂತರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಲಬುರಗಿ ತಹಶೀಲ್ದಾರ ಪ್ರಕಾಶ ಕುದರಿ, ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಶೀಲ್ದಾರ ಮಹಾಂತೇಶ ಮುಡಬಿ ಸೇರಿದಂತೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಇದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here