ಆಳಂದ: ತಾಲೂಕು ಆಡಳಿತ ಆಶ್ರಯದಲ್ಲಿ ನ.11ರಂದು ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಲಿದೆ. ಆಡಳಿತ ಸೌಧನಲ್ಲಿ ಬೆಳಗಿನ 10:00 ಗಂಟೆಗೆ ದಾಸರ ಭಾವಚಿತ್ರ ಪೂಜೆ ಬಳಿಕ ಪಟ್ಟಣದ ಹಳೆಯ ತಹಸೀಲ್ ಕಚೇರಿಯಿಂದ ಶ್ರೀರಾಮ ಮಾರುಕಟ್ಟೆ ಬಸ್ ನಿಲ್ದಾಣ ಮೂಲಕ ಗುರುಭವನದ ವರೆಗೆ ಭಾವಚಿತ್ರದ ಮೆರವಣಿಗೆ ನಡೆದು ನಂತರ ವೇದಿಕೆಯ ಕಾರ್ಯಕ್ರಮ ಜರುಗಲಿದೆ.
ಶಾಸಕ ಸುಭಾಷ ಗುತ್ತೇದಾರ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ, ಉಪಾಧ್ಯಕ್ಷ ಈರಣ್ಣಾ ಹತ್ತರಕಿ ಆಗಮಿಸುವರು. ಅತಿಥಿಗಳಾಗಿ ಕುರುಬ ಸಮಾಜದ ರಾಜ್ಯ ಉಪಾಧ್ಯಕ್ಷ ಹಾಗೂ ಕೆಎಂಎಫ್ ನಿರ್ದೇಶಕ ಈರಣ್ಣಾ ಝಳಕಿ, ಸಮಾಜದ ತಾಲೂಕು ಅಧ್ಯಕ್ಷ ತುಕಾರಾಮ ವಗ್ಗಿ ಅಲ್ಲದೆ ಆಗಮಿಸುವರು.
ಮಹಾತ್ಮಾಗಾಂಧಿ ಪಿಯು ಕಾಲೇಜಿನ ಪ್ರಾಚಾರ್ಯ ಬೀರಣ್ಣಾ ಪೂಜಾರಿ, ಬಂಕೂರ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಪಿ.ಎಸ್. ಕೋಕಟನೂರ ಅವರಿಂದ ಉಪನ್ಯಾಸ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಅಧಿಕಾರಿಗಳು ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರರು ಹಾಗೂ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಯಲ್ಲಪ್ಪ ಸುಬೇದಾರ ಅವರು ತಿಳಿಸಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…