ಕಲಬುರಗಿ: ಮಹಾವಿದ್ಯಾಲಯವು ಪ್ರತಿಭಾವಂತ ಇಂಜಿನಿಯರುಗಳನ್ನು ದೇಶಕ್ಕೆ ನೀಡಿದೆ. ಇಲ್ಲಿ ಕಲಿತು ಹೋದಂತಹ ವಿದ್ಯಾರ್ಥಿಗಳು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವೆಯನ್ನು ಸಲ್ಲಿಸಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ. ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯವು ವಿದ್ಯಾರ್ಥಿಗಳ ಏಳ್ಗೆಗಾಗಿ ಶ್ರಮಿಸುತ್ತಿದ್ದು ಆ ನಿಟ್ಟಿನಲ್ಲಿ ತನ್ನ ಕಾರ್ಯವೈಖರಿಯನ್ನು ರೂಪಿಸಿಕೊಂಡಿದ್ದು ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉತ್ಯುನ್ನತ ತಾಂತ್ರಿಕ ಶಿಕ್ಷಣವನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಕಲಬುರರ್ಗಿಯ ವಾಣಜ್ಯ ತೆರಿಗೆ ಇಲಾಖೆ ಉಪ ಆಯುಕ್ತರಾಧ ಮೀರಾ ಪಂಡಿತ ಅವರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಅವರು ಇಂದು ಇಲ್ಲಿನ ಪಿ.ಡಿ.ಎ. ಸಭಾಂಗಣದಲ್ಲಿ ನಡೆದ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಸಭೇಯನ್ನು ಉದ್ಧೇಶಿಸಿ ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಸಾಗಲು ಬೇಕಾಗುವಂತಹ ಗುಣ ಲಕ್ಷಣಗಳನ್ನು ಉದಾಹರಣೆಯೊಂದಿಗೆ ವಿವರಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವ ಬಗೆ, ತೆಗೆದುಕೊಳ್ಳುವ ನಿರ್ಧಾರ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಬರುವಂತಹ ತೊಂದರೆ ಹಾಗೂ ಅವುಗಳನ್ನು ಮೆಟ್ಟಿ ನಿಲ್ಲುವ ಬಗ್ಗೆ ಉತ್ತಮವಾದ ಉದಾಹರಣೆಗಳೊಂದಿಗೆ ವಿವರಿಸಿದರು.
ಈ ಸಮಾರಂಭದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ.ಶಿವಾನಂದ ಎಸ್. ದೇವರಮನಿ, ಆಡಳಿತ ಮಂಡಳಿ ಸದಸ್ಯರಾದ ಸತೀಶ್ಚಂದ್ರ ಹಡಗಲಿಮಠ, ಡಾ. ವೀರಭದ್ರ ನಂದ್ಯಾಳ ಹಾಗೂ ಟೆಕ್ಯೂಪ್-೩ ಬಿ.ಓ.ಜಿ. ಮತ್ತು ಕೈಗಾರಿಕೋದ್ಯಮಿ ಜಗದೀಶ ಮಾಲು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಿವಿಲ ಇಂಜಿಯರಿಂಗ್ ವಿಭಾಗದ ಪ್ರೊ. ಸರಸ್ವತಿ ರೆಡ್ಡಿ ನಿರೂಪಿಸಿದರು ಹಾಗೂ ಮಹಾವಿದ್ಯಾಲಯದ ಡೀನ ಅಕಾಡೆಮಿಕ್ ಆದ ಡಾ.ಎಸ್.ಅರ್.ಪಾಟೀಲ ವಂದನಾರ್ಪಣೆ ಮಾಡಿದರು. ಈ ಕಾರ್ಯಕ್ರಮದ ಸಂಚಾಲಕರಾಗಿ ಗಣಕತಂತ್ರ ವಿಭಾಗದ ಡಾ. ಸುಜಾತಾ ತೆರೆದಾಳ, ಆಟೋಮೋಬಾಯಿಲನ್ ಪ್ರೊ. ಮಹೇಶ ಅಲ್ಲದ, ಗಣಿತ ಶಾಸ್ತದ ಡಾ. ಶರಣಗೌಡ ಮಾಲಿಪಾಟೀಲ, ಇಂಡಸ್ಟ್ರಿಯಲ್ ಮತ್ತು ಪ್ರೊಡಕ್ಷನ ವಿಭಾಗದ ಪ್ರೊ. ಅವಿನಾಶ ಸಾಂಬ್ರಾಣಿ, ಹಾಗೂ ಆಟೋಮೋಬಾಯಿಲ ವಿಭಾಗದ ಡಾ.ಎಸ್.ಅರ್. ಹೊಟ್ಟಿ ತಮ್ಮ ಕಾರ್ಯವನ್ನು ನಿರ್ವಹಿಸಿದರು.
ಮಹಾವಿದ್ಯಾಲಯದ ವಿವಿಧ ಡೀನಗಳು, ಪರೀಕ್ಷಾ ವಿಭಾದ ಮುಖ್ಯಸ್ಥರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕ, ಉಪ-ಪ್ರಾಧ್ಯಾಪಕರು, ಸಿಬ್ಬಂಧಿಗಳು, ಸುಮಾರು ೬೦೦ ವಿದ್ಯಾರ್ಥಿಗಳು ಹಾಗೂ ಪೋಶಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…