ಸುರಪುರ: ನಗರ ಹಾಗೂ ಸುತ್ತಮುತ್ತಲೂ ನೀರಾವರಿ ಪ್ರದೇಶ ಹೆಚ್ಚು ಇರುವದರಿಂದ ಈ ಭಾಗದಲ್ಲಿ ಸೊಳ್ಳೆಯಿಂದ ಹರಡುವ ಆನೆಕಾಲು ರೋಗವು ಹೆಚ್ಚಾಗಿ ಕಂಡು ಬರುತ್ತದೆ ಒಂದು ವೇಳೆ ಯಾರಿಗಾದರೂ ಈ ರೋಗ ಬಂದ ನಂತರ ಇದನ್ನು ಗುಣಪಡಿಸುವ ಯಾವುದೇ ಔಷಧಿಗಳು ಇಲ್ಲ ಹೀಗಾಗಿ ಆನೆಕಾಲು ರೋಗ ಬಾರದಂತೆ ತಡೆಯಲು ಆರೋಗ್ಯ ಇಲಾಖೆ ನೀಡುವ ಉಚಿತ ಗುಳಿಗೆಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ತಹಶೀಲ್ದಾರ ಸುಬ್ಬಣ್ಣ ಜಮಖಂಡಿ ಕರೆ ನೀಡಿದರು.
ಸೋಮವಾರದಂದು ನಗರದಲ್ಲಿನ ನಗರ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆನೆಕಾಲು ರೋಗ ನಿವಾರಣೆಗಾಗಿ 19ನೇ ಸುತ್ತಿನ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ಮಾತನಾಡಿ 2004ರಲ್ಲಿ ರಾಜ್ಯದ 8-9 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಆದರೆ ಕೆಲವು ಜಿಲ್ಲೆಗಳಲ್ಲಿ ಈ ರೋಗವು ಸಂಪೂರ್ಣವಾಗಿ ಹೋಗಿದ್ದು ಆದರೆ 18 ಸುತ್ತುಗಳಾದರೂ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಈ ರೋಗ ಪ್ರಕರಣಗಳು ಕಂಡು ಬಂದಿರುವುದು ವಿಷಾದದ ಸಂಗತಿ ಹೀಗಾಗಿ ಈ ಮೂರು ಜಿಲ್ಲೆಗಳಲ್ಲಿ ಕಾರ್ಯಕ್ರಮ ಹಾಕಿಕೊಂಡಿದೆ, ಸುರಪುರ ಮತ್ತು ಹುಣಸಗಿ ತಾಲೂಕುಗಳ 4.31ಲಕ್ಷ ಜನರಿಗೆ ಗುಳಿಗೆ ನುಂಗಿಸುವ ಗುರಿ ಹೊಂದಲಾಗಿದ್ದು ಇಂದಿನಿಂದ(ನ14) ನ23ರವರೆಗೆ ಸಾಮೂಹಿಕ ಔಷಧಿ ನುಂಗಿಸುವ (ಎಂ.ಡಿ.ಎ) ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಮುಂಬರುವ ವರ್ಷದಲ್ಲಿ ಆನೆಕಾಲು ರೋಗ ಹೆಚ್ಚಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಈ ದಿಸೆಯಲ್ಲಿ ವರ್ಷಕ್ಕೆ ಒಂದು ಬಾರಿ ಆರೋಗ್ಯ ಇಲಾಖೆಯಿಂದ ಉಚಿತವಾಗಿ ನೀಡುವ ಐವರ್‍ಮೆಕ್ಟಿನ್, ಡಿಇಸಿ ಮತ್ತು ಆಲ್ಪೆಂಡೋಜೋಲ್ ಮೂರು ಗುಳಿಗೆಗಳನ್ನು ತಪ್ಪದೇ ಸೇವಿಸಬೇಕು ಈ ಗುಳಿಗೆಗಳು ಸಂಪೂರ್ಣ ಸುರಕ್ಷಿತ ಹಾಗೂ ಪರಿಣಾಮಕಾರಿಯಾಗಿವೆ ತಪ್ಪದೇ ಊಟ ಮಾಡಿ ಈ ಗುಳಿಗೆಗಳನ್ನು ಸೇವಿಸಬೇಕು ಯಾವುದೇ ತೀವ್ರ ತರಹವಾದ ಅಡ್ಡ ಪರಿಣಾಮಗಳು ಆಗುವದಿಲ್ಲ ಕೆಲವರಿಗೆ ತಮ್ಮ ದೇಹದಲ್ಲಿ ಈ ರೋಗದ ರೋಗಾಣುಗಳು ಇದ್ದಲ್ಲಿ ತಲೆನೋವು, ವಾಂತಿ ಸಣ್ಣಪುಟ್ಟ ಲಕ್ಷಣಗಳು ಕಂಡು ಬರುತ್ತವೆ ಹಾಗೊಂದು ವೇಳೆ ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ ಈ ಬಗ್ಗೆ ಪರಿಶೀಲಿಸಲು ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ್ಯಾಪಿಡ್ ಪರಪೋಸ್ ಟೀಮ್ ಹಾಗೂ ಆಂಬ್ಯಲೆನ್ಸ ಟೀಮಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಅವರು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ ಸಸಿಗೆ ನೀರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು, ಉಪಾಧ್ಯಕ್ಷ ಮಹೇಶ ಪಾಟೀಲ, ತಾ.ಪಂ ಇ.ಓ ಚಂದ್ರಶೇಖರ ಪವಾರ್, ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡನಾಯಕ(ತಾತಾ), ಸದಸ್ಯ ನರಸಿಂಹಕಾಂತ ಪಂಚಮಗಿರಿ, ಅಂಗನವಾಡಿ ಮೇಲ್ವಿಚಾರಕಿ ಪದ್ಮಾ ನಾಯಕ ಉಪಸ್ಥಿತರಿದ್ದರು. ಹಿರಿಯ ಆರೋಗ್ಯ ಸಹಾಯಕ ಸಂಗಣ್ಣ ಚೆಟ್ಟಿ ನಿರೂಪಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಗಣ್ಯರೂ ವೇದಿಕೆ ಮೇಲೆ ಗುಳಿಗೆಗಳನ್ನು ನುಂಗುವ ಮೂಲಕ ಚಾಲನೆ ನೀಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…