ಕಲಬುರಗಿ: ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಸಂಚಾಲಕ, ಕರ್ನಾಟಕ ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾಧ್ಯಕ್ಷ ರವೀಂದ್ರ ಶಾಬಾದಿ ಅವರ ತಂದೆ ಭೋಗಲಿಂಗಪ್ಪ ಬಸಪ್ಪ ಶಾಬಾದಿ (100) ಸೋಮವಾರ ಬೆಳಗ್ಗೆ ನಿಧನರಾದರು.
ಮೃತರು ರವೀಂದ್ರ ಶಾಬಾದಿ ಸೇರಿದಂತೆ ನಾಲ್ಕು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದ ಅವರ ಸ್ವಂತ ಹೊಲದಲ್ಲಿ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಶೋಕ ಸಂತಾಪ: ಶಾಸಕ ದತ್ತಾತ್ರೇಯ ಪಾಟೀಲ, ಮಾಜಿ ಶಾಸಕ ಅಲ್ಲಮಪ್ರಭು ಪಾಟೀಲ, ಬಸವ ಕೇಂದ್ರದ ಶಿವಶರಣಪ್ಪ ಕಲ್ಬುರ್ಗಿ, ಸೋಮಣ್ಣ ನಡಕಟ್ಟಿ, ಶರಣಬಸವ ಕಲ್ಲಾ, ಬಸವ ಸಮಿತಿಯ ಡಾ. ವಿಲಾಸವತಿ ಖೂಬಾ, ಶರಣ ಸಾಹಿತ್ಯ ಪರಿಷತ್ ನ ಡಾ. ಮಲ್ಲಿಕಾರ್ಜುನ ವಡ್ಡನಕೇರಿ, ರಾಷ್ಟ್ರೀಯ ಬಸವ ದಳದ ಆರ್.ಜಿ. ಶೆಟಗಾರ, ವೈಜ್ಞಾನಿಕ ಸಂಶೋಧನಾ ಪರಿಷತ್ ನ ಡಾ. ಶಿವರಂಜನ ಸತ್ಯಂಪೇಟೆ, ಸತೀಶ ಸಜ್ಜನ, ಪರಮೇಶ್ವರ ಶೆಟಗಾರ ಇತರರು ಶೋಕ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…