ಕಲಬುರಗಿ: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿ ಓರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ.
ಮಲ್ಲಿಕಾರ್ಜುನ್ ಮುತ್ಯಾಲ (64) ಕೊಲೆಯಾದ ದುರ್ದೈವಿ. ಸೇಡಂ ನಿವಾಸಿಯಾಗಿರುವ ಮಲ್ಲಿಕಾರ್ಜುನ ಮುತ್ಯಾಲ ಎಲೆಕ್ಟ್ರಾನಿಕ್ ಅಂಗಡಿ, ಟಿವಿ ಶಾಪ್ ಗಳನ್ನು ನಡೆಸುತ್ತಿದ್ದರು.
ನಿನ್ನೆ ಸೇಡಂ ನಲ್ಲಿ ನಡೆದಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶದಲ್ಲಿಯೂ ಭಾಗಿಯಾಗಿದ್ದರು. ಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಲು ತೀರ್ಮಾನಿಸಿದ್ದರು. ಆದರೆ ಸಮಯದ ಅಭಾವದಿಂದಾಗಿ ಸಿಎಂ ಸಮ್ಮುಖದಲ್ಲಿ ಬಿಜೆಪಿ ಸೇರಲು ಸಾಧ್ಯವಾಗಿರಲಿಲ್ಲ.
ನಿನ್ನೆ ರಾತ್ರಿ ಅಂಗಡಿಗೆ ಬಂದು ಮಲಗಿದ್ದ ಮಲ್ಲಿಕಾರ್ಜುನ ಮುತ್ಯಾಲರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಎಷ್ಟೊತ್ತಾದರೂ ಮುತ್ಯಾಲ ಅವರು ಮನೆಗೆ ಬಾರದಿದ್ದ ಹಿನ್ನೆಲೆಯಲ್ಲಿ ಕುಟುಂಬದವರು ಅಂಗಡಿ ಬಳಿ ಬಂದು ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಮುತ್ಯಾಲ ಅವರ ಮರ್ಮಾಂಗಕ್ಕೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ.
ಮಲ್ಲಿಕಾರ್ಜುನ ಮುತ್ಯಾಲ ಈ ಹಿಂದೆ ಜೆಡಿಎಸ್ ಕಾರ್ಯಕರ್ತರಾಗಿದ್ದರು. ಸ್ಥಳಕ್ಕೆ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಎಸ್ಪಿ ಇಶಾ ಪಂತ್, ಶಿವಕುಮಾರ ಪಾಟೀಲ ತೆಲ್ಕೂರ, ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿದ್ದರು.ಭೇಟಿ ನೀಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…