ಬಿಸಿ ಬಿಸಿ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ ಕೋಶದ ಉದ್ಘಾಟನೆ ಉತ್ತಮ ಭವಿಷ್ಯದ ಕನಸ್ಸು ಕಾಣಬೇಕು: ಡಾ. ಗೋಪಾಲಕೃಷ್ಣ

ಕಲಬುರಗಿ : ವಿದ್ಯಾರ್ಥಿಗಳು ಕಷ್ಟಪಟ್ಟು ಓದುವುದು, ಸತತ ಅಭ್ಯಾಸ ಮಾಡುವದರೊಂದಿಗೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಕನಸ್ಸನ್ನು ಕಾಣಬೇಕೆಂದು ಎಂದು ಕಲಬುರಗಿ ಜಿಲ್ಲಾ ಪ್ರೊಬೇಷನಲ್ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ ಬಿ. ಅವರು ಸಲಹೆ ನೀಡಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮಂಗಳವಾರ ಯುಪಿಎಸ್‌ಸಿ, ಕೆಪಿಎಸ್‌ಸಿ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಕೋಶವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವಿದ್ಯಾರ್ಥಿಗಳು ಗುರಿ ಮತ್ತು ಮಹತ್ವಕಾಂಕ್ಷೆ ಹೊಂದಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಐಎಎಸ್ ಮತ್ತು ಕೆಎಎಸ್ ಪರೀಕ್ಷೆಗಳಿಗೆ ಕರ್ನಾಟಕದಿಂದ ಬಹಳ ಕಡಿಮೆ ಜನರು ಹಾಜರಾಗುತ್ತಾರೆ. ಇಲ್ಲಿಯ ಜನರಿಗೆ ಮೇಡಿಕಲ್ ಮತ್ತು ಇಂಜಿನಿಯರಿಂಗ್ ಕೋರ್ಸುಗಳಲ್ಲಿ ಹೆಚ್ಚು ಆಸಕ್ತಿ ಇದೆ. ಐಎಎಸ್ ಕೋರ್ಸಿಗೆ ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ವಿದ್ಯಾರ್ಥಿಗಳು ಬರಬೇಕೆಂದು ತಿಳಿಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕು, ಪ್ರಸ್ತುತ ವಿಷಯಗಳನ್ನು ಓದಬೇಕು ಹೆಚ್ಚು ಹೆಚ್ಚು ಸಮಯವನ್ನು ಓದಿಗೆ ಮೀಸಲಿಡಬೇಕು ಎಂದು ಹೇಳಿದರು.

ಯಾವುದೇ ವಿಷಯ ಕಠಿಣ ಅಲ್ಲ ಆದರೆ ನಾವು ಅದಕ್ಕೆ ಆಸಕ್ತಿ ತೋರಿಸದೆ ಇರುವುದು ಕಠಿಣವಾಗುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹಲವಾರು ಉನ್ನತ ವಿಚಾರಗಳನ್ನು ಹಂಚಿಕೊಂಡರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಮಾತನಾಡುತ್ತಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಮೊದಲಿನಿಂದಲೂ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜೀಯವರು ಸಹ ಮಹಿಳೆಯರ ಶಿಕ್ಷಣಕ್ಕೆ ಮತ್ತು ಅವರ ಸಬಲೀಕರಣಕ್ಕೆ ಮಹತ್ವ ನೀಡಿದ್ದಾರೆ. ಈಗ ಪುರುಷ ಮತ್ತು ಮಹಿಳೆ ಎನ್ನುವ ಭೇದ ಇಲ್ಲ, ಎಲ್ಲಾ ವಿಭಾಗಗಳಲ್ಲಿಯೂ ಮಹಿಳೆಯರು ಸಾಧನೆ ಮಾಡುತ್ತಿದ್ದಾಳೆ. ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬೇಕೆಂದು ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ ಅವರು ಮಾತನಾಡಿ, ಶರಣಬಸವೇಶ್ವರ ಸಂಸ್ಥಾನ ಅನ್ನದಾಸೋಹದ ಜತೆಗೆ ಜ್ಞಾನದಾಸೋಹ ನೀಡುತ್ತಿದೆ. ಅದರ ಲಾಭವನ್ನು ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಪುಸ್ತಕ ಓದುವ ರೂಢಿ ಬೆಳೆಸಿಕೊಳ್ಳಬೇಕು. ವ್ಯರ್ಥ ಕಾಲ ಹರಣ ಮಾಡದೇ ಜೀವನದಲ್ಲಿ ನಿರ್ದಿಷ್ಟವಾದ ಗುರಿ ಹೊಂದಿರಬೇಕು. ಐಎಎಸ್, ಕೆಎಎಸ್ ಅಧಿಕಾರಿಗಳಾಗುವ ಕನಸ್ಸು ಕಾಣಬೇಕೆಂದು ಎಂದು ಕಿವಿ ಮಾತು ಹೇಳಿದರು.

ಪ್ರೊ. ಶಾಂತಲಾ ನಿಷ್ಠಿ, ಡಾ. ಇಂದಿರಾ ಶೇಟಕಾರ, ಪ್ರೊ. ಸಾವಿತ್ರಿ ಜಂಬಲದಿನ್ನಿ, ಈರಣ್ಣ ಸ್ವಾದಿ ವೇದಿಕೆ ಮೇಲಿದ್ದರು. ಕಾರ್ಯಕ್ರಮದಲ್ಲಿ ಡಾ.ಸಿದ್ದಮ್ಮ ಗುಡೇದ್, ಡಾ. ಪುಟ್ಟಮಣಿ ದೇವಿದಾಸ, ಡಾ.ನಾಗರತ್ನ ದೇಶಮಾನೆ, ಪ್ರೊ. ಜಾನಕಿ ಹೊಸೂರ, ಪ್ರೊ. ರೇವಯ್ಯ ವಸ್ತ್ರದಮಠ, ಡಾ.ಸೀಮಾ ಪಾಟೀಲ, ಡಾ.ಸಂಗೀತಾ, ಸಿದ್ದು ಪಾಟೀಲ, ಕೃಪಾಸಾಗರ ಗೊಬ್ಬುರ, ದೀಶಾ ಮೆಹತಾ, ಅನಿತಾ ಗೊಬ್ಬುರ, ಪದ್ಮಜ ಹೆಚ್. ವಿದ್ಯಾ ರೇಶ್ಮಿ, ಅನುಸೂಯ ಬಡಿಗೇರ, ವಿನೋದ ಹಲಕಟ್ಟಿ, ಅಶೋಕ ಮೂಲಗೆ, ಅಪ್ಪಾಸಾಬ ಬಿರಾದಾರ, ಪರುತಯ್ಯ ಹಿರೇಮಠ ಮತ್ತು ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.ಡಾ.ಇಂದಿರಾ ಶೇಟಕಾರ ಸ್ವಾಗತಿ ಪ್ರಾಸ್ತಾವಿಕ ಮಾತನಾಡಿದರು, ಡಾ.ಎನ್.ಎಸ್.ಹೂಗಾರ ವಂದಿಸಿದರು, ಪ್ರೊ. ಸಾವಿತ್ರಿ ಜಂಬಲದಿನ್ನಿ ನಿರೂಪಿಸಿದರು. ಪ್ರೊ. ರೇವಯ್ಯ ವಸ್ತ್ರದಮಠ ಮತ್ತು ಸಂಗಡಿಗರು ಪ್ರಾರ್ಥಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

12 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

22 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

22 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

22 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago