ಹೈದರಾಬಾದ್ ಕರ್ನಾಟಕ

CUK; ಜನಜಾತಿ ಗೌರವ್ ದಿವಸ್ ಆಚರಣೆ

ಕಲಬುರಗಿ: “ಬಗವಾನ್ ಬಿμರ್Á ಮುಂಡಾ ಒಬ್ಬ ಶ್ರೇಷ್ಠ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬುಡಕಟ್ಟು ನಾಯಕ. ಭಾರತದ ಬುಡಕಟ್ಟು ಪ್ರದೇಶಗಳಲ್ಲಿ ಭೂಕಬಳಿಕೆ ಮತ್ತು ಊಳಿಗಮಾನ್ಯ ಪದ್ಧತಿಯನ್ನು ಸ್ಥಾಪಿಸುವುದರ ವಿರುದ್ಧ ಹೋರಾಡಿದವರು” ಎಂದು ಸಿಯುಕೆಯ ಕುಲಪತಿ ಪೆÇ್ರ.ಬಟ್ಟು ಸತ್ಯನಾರಾಯಣ ಹೇಳಿದರು.

ಬಾಗವಾನ್ ಬಿμರ್Á ಮುಂಡಾ ಅವರ ಜನ್ಮ ದಿನಾಚರಣೆಯನ್ನು ಜನಜಾತೀಯ ಗೌರವ ದಿವಸ್ ಎಂದು ಆಚರಿಸಿಲಾಗುತ್ತದೆ. ಅವರು ಮತ್ತಷ್ಟು ಮಾತನಾಡಿ “ಬ್ರಿಟಿμïರ ತಪ್ಪು ಭೂ ವ್ಯವಸ್ಥೆಯಿಂದಾಗಿ ಬುಡಕಟ್ಟು ಜನಾಂಗದವರ ತಮ್ಮ ಸ್ವಂತ ಭೂಮಿಯಲ್ಲಿ ಕಾರ್ಮಿಕರಾಗುವಂತಾಯಿತು.

ಬಿμರ್Á ಮುಂಡಾ ಇದರ ವಿರುದ್ಧದ ಜನಾಂದೋಲನವನ್ನು ನಡೆಸಿದರು ಮತ್ತು ಮುಂಡಾ ಸಾಮ್ರಾಜ್ಯವನ್ನು ಸ್ವತಂತ್ರ ಬುಡಕಟ್ಟು ಸಾಮ್ರಾಜ್ಯವೆಂದು ಘೋಷಿಸಿದರು. ಬ್ರಿಟಿಷರು ಅವರನ್ನು ಬಂಧಿಸಿ ಜೈಲಿಗೆ ಹಾಕಿದರು. ಅವರು 25 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಎಲ್ಲಾ ಭಾರತೀಯರಿಗೆ ಮತ್ತು ನಿರ್ದಿಷ್ಟವಾಗಿ ಭಾರತೀಯ ಬುಡಕಟ್ಟುಗಳಿಗೆ ಸ್ಫೂರ್ತಿಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಜಾನಪದ ಮತ್ತು ಬುಡಕಟ್ಟು ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಲಾಂಗ್‍ಶಿಬೀ ಕಿತಾನ್, “ಭಾರತೀಯ ಬುಡಕಟ್ಟುಗಳು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿವೆ. ಪ್ರಮುಖ ಸವಾಲುಗಳೆಂದರೆ ಜನಾಂಗೀಯ ಗುರುತಿನ ಪ್ರತಿಪಾದನೆ ಮತ್ತು ವರ್ಣಭೇದ ನೀತಿ, ನೈಸರ್ಗಿಕ ಸಂಪನ್ಮೂಲಗಳ ಮೇಲಿನ ನಿಯಂತ್ರಣದ ನಷ್ಟ ಮತ್ತು ಋಣಭಾರ, ಬಡತನ ಮತ್ತು ಮೂಲಭೂತ ಮೂಲಸೌಕರ್ಯಗಳ ಕೊರತೆ, ಸಂಪನ್ಮೂಲ ಶೋಷಣೆ ಮತ್ತು ಸ್ಥಳಾಂತರ, ಜೀವನಾಧಾರ ದುರುಪಯೋಗ ಮತ್ತು ಸಾಂಸ್ಕøತಿಕ ಗುರುತಿನ ನಷ್ಟ. ನಮ್ಮ ಬುಡಕಟ್ಟು ಜನಸಂಖ್ಯೆ ಮತ್ತು ಸಂಸ್ಕೃತಿಯನ್ನು ರಕ್ಷಿಸಲು ನಾವು ಈ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ.”

ಇದೇ ಸಂದರ್ಭದಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹದ ನಿಮಿತ್ತ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಅತಿಥಿ ಶ್ರೀ. ಬಸವರಾಜ ಜಿಲ್ಲೆ, ಕಮಾಂಡರ್, ಕರ್ನಾಟಕ ಮೀಸಲು ಪೆÇಲೀಸ್, ಕಲಬುರಗಿ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

“ಈ ವರ್ಷದ ವಿಜಿಲೆನ್ಸ್ ಜಾಗೃತಿ ಸಪ್ತಾಹದ ಥೀಮ್ ‘ಅಭಿವೃದ್ಧಿ ಹೊಂದಿದ ರಾಷ್ಟ್ರಕ್ಕಾಗಿ ಭ್ರμÁ್ಟಚಾರ ಮುಕ್ತ ಭಾರತ’, ನಾವೆಲ್ಲರೂ ನಮ್ಮ ರಾಷ್ಟ್ರದ ಅಭಿವೃದ್ಧಿಗಾಗಿ ಭ್ರμÁ್ಟಚಾರ ಮುಕ್ತ ಭಾರತದ ಮಹತ್ವದ ಬಗ್ಗೆ ಸಂದೇಶವನ್ನು ಹರಡಬೇಕಾಗಿದೆ. ವಿದ್ಯಾರ್ಥಿಗಳೇ ಈ ದೇಶದ ಭವಿಷ್ಯ ನೀವೆಲ್ಲರೂ ಭ್ರμÁ್ಟಚಾರ ಮುಕ್ತ ದೇಶವನ್ನಾಗಿ ಮಾಡಬೇಕು. ಸಾರ್ವಜನಿಕ ವಲಯದಲ್ಲಿನ ಭ್ರμÁ್ಟಚಾರವನ್ನು ಕಡಿಮೆ ಮಾಡಲು ಸಕಾಲ ಮತ್ತು ಆರ್‍ಟಿಐ ಉತ್ತಮ ಪರಿಣಾಮ ಬೀರಿದೆ” ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಜಿಲೆನ್ಸ್ ಜಾಗೃತಿ ಸಪ್ತಾಹ ಆಚರಣಾ ಸಮಿತಿ ಅಧ್ಯಕ್ಷ ಪೆÇ್ರ.ಎಂ.ಎ.ಅಸ್ಲಂ, ಸಿಯುಕೆ ವಿಜಿಲೆನ್ಸ್ ಅಧಿಕಾರಿ ಡಾ.ಎಂ.ಡಿ. ಜೊಹೈರ್, ಜನಜಾತಿಯ ಗೌರವ ದಿವಸ್ ಕಾರ್ಯಕ್ರಮದ ಸಂಯೋಜಕಿ ಡಾ.ರೂಪ ಸೋನಾವಾಲ್, ಎಲ್ಲಾ ಡೀನ್‍ರು, ಮುಖ್ಯಸ್ಥರು, ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago