ಬಿಸಿ ಬಿಸಿ ಸುದ್ದಿ

ಮಧುರಾಣಿ, ಗಂಗಾಧರಯ್ಯ, ಆಶಾ ರಘು, ಸಬಿತಾ ಬನ್ನಾಡಿ, ಡಾ. ಅಪ್ಪಗೆರೆ, ಡಾ. ಎಂ.ಬಿ. ಕಟ್ಟಿ ಕೃತಿಗಳಿಗೆ `ಅಮ್ಮ ಪ್ರಶಸ್ತಿ’

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ `ಅಮ್ಮ ಪ್ರಶಸ್ತಿ’ಗೆ ಮಧುರಾಣಿ ಎಚ್.ಎಸ್., ಎಸ್.ಗಂಗಾಧರಯ್ಯ, ಆಶಾ ರಘು, ಸಬಿತಾ ಬನ್ನಾಡಿ, ಡಾ.ಅಪ್ಪಗೆರೆ ಸೋಮಶೇಖರ ಮತ್ತು ಡಾ.ಎಂ.ಬಿ.ಕಟ್ಟಿ ಅವರ ಕೃತಿಗಳು ಆಯ್ಕೆಯಾಗಿವೆ ಎಂದು `ಅಮ್ಮ ಪ್ರಶಸ್ತಿ’ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಧುರಾಣಿ ಎಚ್.ಎಸ್.ಬೆಂಗಳೂರು ಅವರ `ನೀಲಿ ಚುಕ್ಕಿಯ ನೆರಳು’ (ಕವನ ಸಂಕಲನ), ಎಸ್.ಗಂಗಾಧರಯ್ಯ ತುಮಕೂರು ಅವರ `ಮಣ್ಣಿನ ಮುಚ್ಚಳ’ (ಕಥಾ ಸಂಕಲನ), ಆಶಾ ರಘು ಅವರ `ಮಾಯೆ (ಕಾದಂಬರಿ), ಸಬೀತಾ ಬನ್ನಾಡಿ ಅವರ `ಇದಿರು ನೋಟ’ (ಅಂಕಣ ಬರಹ ಸಂಕಲನ), ಡಾ.ಅಪ್ಪಗೆರೆ ಸೋಮಶೇಖರ ಅವರ `ಬೆವರ ಬವಣೆ’ ಮತ್ತು ಡಾ.ಎಂ.ಬಿ.ಕಟ್ಟಿ ಅವರ `ಆರೂಢ ಪಂಥ’ (ಸಂಕೀರ್ಣ) ಕೃತಿಗಳನ್ನು 22 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 5000 ರೂ. ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ ಮತ್ತು ಸತ್ಕಾರ ಒಳಗೊಂಡಿರುತ್ತದೆ. ಸಂಕೀರ್ಣ ವಿಭಾಗದಲ್ಲಿ ಇಬ್ಬರು ಲೇಖಕರು ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ಇದೇ ನವೆಂಬರ್ 26 ರಂದು ಸಂಜೆ 5.30ಕ್ಕೆ ಸೇಡಮ್‍ನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗುವ ಸಮಾರಂಭದಲ್ಲಿ `ಅಮ್ಮ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅಮ್ಮ ಪ್ರಶಸ್ತಿಗೆ 22 ರ ವರ್ಷದ ಸಂಭ್ರಮ : ಪತ್ರಕರ್ತ-ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿನಲ್ಲಿ ಸ್ಥಾಪಿಸಿದ `ಅಮ್ಮ ಪ್ರಶಸ್ತಿ’ಗೆ ಈಗ 22 ನೇ ವರ್ಷದ ಸಂಭ್ರಮ. ಕನ್ನಡದ ಪ್ರತಿಭಾವಂತ ಬರಹಗಾರರು `ಅಮ್ಮ ಪ್ರಶಸ್ತಿ’ಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ ಹಾಗೂ ಗೌರವಿಸಿದ್ದಾರೆ. ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ `ಅಮ್ಮ ಪ್ರಶಸ್ತಿ’ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪ್ರತಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದೇ ಇದೊಂದು ಗೌರವಾನ್ವಿತ ಪ್ರಶಸ್ತಿಯಾಗಿ ರೂಪುಗೊಂಡಿದೆ ಎಂಬುದಕ್ಕೆ ಸಾಕ್ಷಿ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago