ಬಿಸಿ ಬಿಸಿ ಸುದ್ದಿ

ಟೀಕೆಗಳಷ್ಟೇ ಅಲ್ಲ | ಸಲಹೆಗಳು ಕೊಡುವ ಕೆಲಸವೂ ಮಾಧ್ಯಮಗಳಿಂದಾಗಲಿ: ಸಚಿವ ಮಾಧುಸ್ವಾಮಿ

ಬೆಂಗಳೂರು: ಟೀಕೆಗಳು ಮಾಡುವುದಷ್ಟೇ ಮಾಧ್ಯಮಗಳ ಕೆಲಸವೆಂದು ಪರಿಭಾವಿಸದೇ ಆಡಳಿತ ವ್ಯವಸ್ಥೆಗೆ ಸೂಕ್ತ ಸಲಹೆ-ಸೂಚನೆಗಳು, ಮಾರ್ಗದರ್ಶನ ಕೊಡುವ ಕೆಲಸಗಳು ಮಾಧ್ಯಮಗಳಿಂದಾಗಬೇಕು; ಇದು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಅಗತ್ಯವಾಗಿದೆ ಎಂದು ಕಾನೂನು ಮತ್ತು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಅಭಿಪ್ರಾಯಪಟ್ಟರು.

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ನಗರದ ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ “ರಾಷ್ಟ್ರ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ” ವಿಚಾರಸಂಕಿರಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರಕಾರಗಳು ಮತ್ತು ಆಡಳಿತ ವ್ಯವಸ್ಥೆ ತಪ್ಪು ಮಾಡಿದಲ್ಲಿ ಅವಹೇಳನ ಮಾಡದೇ ಅದನ್ನು ಅತ್ಯಂತ ನವೀರಾಗಿ ತಿದ್ದಿ ಹೇಳುವ ಕೆಲಸ ಮಾಧ್ಯಮಗಳು ಮಾಡಬೇಕು. ಇದುವರೆಗೆ ಏನಾಗಿದೆ; ಏನಾಗಬೇಕಾಗಿತ್ತು ಎನ್ನುವುದರ ಕುರಿತು ವಿಶ್ಲೇಷಣೆ ಮಾಡಿ ಸರಕಾರಗಳಿಗೆ ಚಾಟಿ ಬಿಸಿ ಎಚ್ಚರಿಸುವ ಕೆಲಸಗಳನ್ನು ಮಾಡಬೇಕು ಎಂದು ಹೇಳಿದ ಸಚಿವ ಮಾಧುಸ್ವಾಮಿ ಅವರು ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂಬ ಅಂಶವನ್ನು ವಿವಿಧ ರೀತಿಯ ಉದಾರಣೆಗಳ ಮೂಲಕ ತಿಳಿಯಪಡಿಸಿದರು.

ರಾಷ್ಟ್ರ ನಿರ್ಮಾಣವೆಂದರೇ ಕೇವಲ ದೊಡ್ಡ ದೊಡ್ಡ ಕೈಗಾರಿಗಳ ಅಭಿವೃದ್ಧಿಯಲ್ಲ. ಜಾತಿ-ಮತ, ಪಂಥ, ಸಂಸ್ಕøತಿ ಸೇರಿದಂತೆ ವೈವಿಧ್ಯತೆಯನ್ನೇ ಜೀವಾಳವಾಗಿಸಿಕೊಂಡಿರುವ ಎಲ್ಲವನ್ನು  ಮತ್ತು ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಮುನ್ನಡೆಯುತ್ತಾ ಎಲ್ಲ ರಂಗಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸುವುದಾಗಿದೆ ಎಂದು ಅವರು ವಿವರಿಸಿದರು.

ನಿಷ್ಪಕ್ಷಪಾತ ವರದಿಗಾರಿಕೆ ಮತ್ತು ಮಾಧ್ಯಮಗಳ ವರದಿ ಹಾಗೂ ನಿರೀಕ್ಷೆಗಳ ಕುರಿತು ಸಹ ಅವರು ಮಾತನಾಡಿದರು. ಹಿರಿಯ ಪತ್ರಕರ್ತರಾದ ರಾಜಾ ಶೈಲೇಶಚಂದ್ರಗುಪ್ತ ಅವರು ಮಾತನಾಡಿ, ಜನರ ಭಾವನೆಗಳಿಗೆ ಕನ್ನಡಿ ಹಿಡಿಯುವ ಕೆಲಸ ಮಾಧ್ಯಮಗಳು ಮಾಡಬೇಕು. ಮಾಧ್ಯಮಗಳ ಮೇಲೆ ನಿರೀಕ್ಷೆಗಳು ಹೆಚ್ಚಾಗಿದ್ದು, ಅವುಗಳು ಈಡೇರಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಲೋಪಗಳಾಗದೇ ನಿರೀಕ್ಷೆಗಳು ನಿಜವಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅವರು ಮಾಧ್ಯಮಗಳು ಇರುವ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.

ಹಿರಿಯ ಪತ್ರಕರ್ತರಾದ ಡಾ.ಆರ್.ಪೂರ್ಣಿಮಾ ಅವರು ಮಾತನಾಡಿ, ಭಾರತದಲ್ಲಿ ಪತ್ರಿಕಾರಂಗ ಹುಟ್ಟಿದ್ದೇ ರಾಷ್ಟ್ರೀಯ ಚಳವಳಿ ಸಂದರ್ಭದಲ್ಲಿ. ಸ್ವಾತಂತ್ರ್ಯ ಚಳವಳಿಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ಮತ್ತು ಬ್ರಿಟೀಷರ ವಿರುದ್ಧ ಜನರು ಸಂಘಟಿತರಾಗಿ ಹೋರಾಟಕ್ಕಿಳಿಯುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದು. ಪತ್ರಿಕಾರಂಗವನ್ನು ರಾಷ್ಟ್ರೀಯ ಚಳವಳಿ ಅತ್ಯಂತ ಸಮರ್ಪಕವಾಗಿ ಬಳಸಿಕೊಂಡಿತು ಎಂದರು.

ಜರ್ನಲಿಸ್ಟ್ ಆ್ಯಕ್ಟಿವಿಸ್ಟ್ ಕೂಡ ಹೌದು ಎಂದು ಹೇಳಿದ ಅವರು ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವ ಕೆಲಸವನ್ನು ಮಾಧ್ಯಮ ಪ್ರತಿನಿಧಿಗಳು ಮಾಡಬೇಕು ಎಂದರು.

ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿರುವ ಅನಿಷ್ಠಗಳ ಕುರಿತು ಆಡಳಿತ ವ್ಯವಸ್ಥೆ ಎಚ್ಚರಿಸುವುದು ಮತ್ತು ಲಿಂಗ ಸಮಾನತೆ ಕುರಿತು ತಿಳಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಜನಪರ ದೃಷ್ಟಿಕೋನವನ್ನಿಟ್ಟುಕೊಂಡು ಕಾರ್ಯನಿರ್ವಹಿಸುವುದು ನಮ್ಮ ಆದ್ಯತೆಯಾಗಬೇಕು ಎಂದರು.

ಗೌರವ ಉಪಸ್ಥಿತರಿದ್ದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ.ಪಿ.ಎಸ್.ಹರ್ಷ ಅವರು ಮಾತನಾಡಿ, ನೈತಿಕತೆ, ಮೌಲ್ಯಗಳನ್ನು ಉಳಿಸಿ ಬೆಳೆಸುವ ಮತ್ತು ಮುಂದಿನ ಪೀಳಿಗೆಗೆ ತಿಳಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದರು.

ಸದೃಢ ರಾಷ್ಟ್ರನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದ ಅವರು ಮಾಧ್ಯಮಗಳ ಜವಾಬ್ದಾರಿ ಮತ್ತು ಅಲ್ಲಿನ ಒತ್ತಡದ ಕುರಿತು ತಿಳಿಸುವುದರ ಜೊತೆಗೆ ಇಲಾಖೆಯ ಜನಪದ ಮತ್ತು ಮಾರ್ಚ್ ಆಫ್ ಕರ್ನಾಟಕ ಮಾಸಿಕ ಪತ್ರಿಕೆಗಳ ಸಂಪಾದಕರಾಗಿ ಗುಣಮಟ್ಟದ ಮಾಸಿಕ ಪತ್ರಿಕೆ ಹೊರತರುವಲ್ಲಿ ವಹಿಸುವ ಶ್ರಮ ಮತ್ತು ಅನುಭವಗಳನ್ನು ಬಿಚ್ಚಿಟ್ಟರು.

ಖ್ಯಾತ ಚಲನಚಿತ್ರ ನಟ ಅನಂತನಾಗ್ ಅವರು ಪ್ರಧಾನ ಭಾಷಣ ಮಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಿ.ರೂಪಾ, ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ.ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್, ಗೋಪಾಲ್ ಯಡಗೆರೆ, ಸಿ.ಕೆ.ಮಹೇಂದ್ರ, ಜಗನ್ನಾಥ ಬಾಳ, ಕೆ.ವಿ.ಶಿವಕುಮಾರ, ದೇವಿಂದ್ರಪ್ಪ ಕಪನೂರು, ನಾಗಾರ್ಜುನ ದ್ವಾರಕನಾಥ, ಲಕ್ಷ್ಮೀನಾರಾಯಣ ಎಸ್., ಬದ್ರುದ್ದೀನ್ ಕೆ., ಕೆ.ಎಂ.ಶಿವರಾಜು ಸೇರಿದಂತೆ ಹಿರಿಯ ಪತ್ರಕರ್ತರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago