ಕಲಬುರಗಿ: ಟಂಟಂ ಪಲ್ಟಿಯಾಗಿ ಅಪಘಾತದಲ್ಲಿ ಗಾಯಗೊಂಡ 10 ಪ್ರಯಾಣಿಕರಿಗೆ ಚಿತ್ತಾಪುರ ಮತಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.
ಸಂಕನೂರು ಗ್ರಾಮದಿಂದ ಕುಂಬಾರಹಳ್ಳಿಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿತ್ತು. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆ ಮತ್ತು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಶಾಸಕ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಮಾತುಕತೆ ನಡೆಸಿದ ಖರ್ಗೆ ಅವರು ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.