ನ್ಯೂಸ್ ಪೆÇೀರ್ಟಲ್ ಮತ್ತು ದೃಶ್ಯ ಮಾಧ್ಯಮಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟನೆ

0
9

ಬೆಂಗಳೂರು: ಕೆಲವು ನ್ಯೂಸ್ ಪೆÇೀರ್ಟಲ್ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮತದಾರರ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗಿದೆ ಎಂದು ವರದಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ., ರವರು ಯಾವುದೇ ಸಂಸ್ಥೆಗೆ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರೇತರ ಸಂಸ್ಥೆ ಚುಲುಮೆರವರಿಗೆ ಮತದಾರರ ಜಾಗೃತಿ ಅಭಿಯಾನದ ಬಗ್ಗೆ ಅರಿವು ಮೂಡಿಸಲು ನೀಡಿದ್ದ ಅನುಮತಿಯನ್ನು ದೂರು ಬಂದ ಕೂಡಲೇ ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ., ರವರು ರದ್ದುಪಡಿಸಿರುತ್ತಾರೆ.

Contact Your\'s Advertisement; 9902492681

ಬೂತ್ ಮಟ್ಟದ ಅಧಿಕಾರಿ ಗುರುತಿನ ಚೀಟಿ ದುರುಪಯೋಗ ಸಂಬಂಧ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿರವರು ವೈಟ್ ಫೀಲ್ಡ್ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ತನಿಖೆ ನಡೆಸಿ, ಉಲ್ಲಂಘನೆಯ ಪ್ರಕರಣ ಕಂಡು ಬಂದಲ್ಲಿ  ನಿಯಮಾನುಸಾರ ಕ್ರಮ ಜರುಗಿಸಲು ಜಿಲ್ಲಾ ಚುನಾವಣಾಧಿಕಾರಿ, ಬಿ.ಬಿ.ಎಂ.ಪಿ., ರವರಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here