ಶಹಾಬಾದ: ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ವತಿಯಿಂದ 2022-23ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು ನವೆಂಬರ್ 18 ರಂದು ಸರ್ಕಾರಿ ಬಾಲಕರ ಪ್ರೌಢಶಾಲೆ ಚಿತ್ತಾಪೂರದಲ್ಲಿ ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ ಶಿಕ್ಷಣ ಸಂಯೋಜಕ ವೆಂಕಟರೆಡ್ಡಿ ತಿಳಿಸಿದ್ದಾರೆ.
ಈ ಸ್ಪರ್ಧೆಯಲ್ಲಿ ಸರ್ಕಾರದಿಂದ ಮಾನ್ಯತೆ ಹೊಂದಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ಭಕ್ತಿಗೀತೆ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಪಾಟೋಪಕರಣ ತಯಾರಿಕೆ ಸ್ಪರ್ಧೆ ಹಾಗೂ ಸ್ಥಳದಲ್ಲಿ ಚಿತ್ರ ಬರೆಯೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಒಂದು ಸ್ಪರ್ಧೆಯಲ್ಲಿ ಒಬ್ಬ ಶಿಕ್ಷಕ ಮಾತ್ರ ಭಾಗವಹಿಸಬಹುದು ತಾಲೂಕ ಹಂತದಲ್ಲಿ ತಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಜಿಲ್ಲಾ ಹಂತಕ್ಕೆ ಅರ್ಹರಾಗಿರುತ್ತಾರೆ. ನಿಧಿಗಳ ಕಚೇರಿ ವತಿಯಿಂದ ಇದುವರೆಗೆ ನಡೆಸಲಾಗುವ ರಾಜ್ಯಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ಯಾವುದೇ ಶಿಕ್ಷಕರು ಒಂದು ಬಾರಿಯಾದರೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ ಅದೇ ಶಿಕ್ಷಕರು ಪುನಃ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ ಬೇರೆ ಸ್ಪರ್ಧೆಯಲ್ಲಿ ಭಾಗವಹಿಸಬಹುದು ತಾಲೂಕು ಹಂತದಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಶಿಕ್ಷಕರಿಗೆ ಪ್ರತ್ಯೇಕ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ವಿತರಿಸಲಾಗುತ್ತದೆ.ಆದ್ದರಿಂದ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಎಂದು ಶಿಕ್ಷಣ ಸಂಯೋಜಕ ವೆಂಕಟರೆಡ್ಡಿ ಕೋರಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…