ಬಿಸಿ ಬಿಸಿ ಸುದ್ದಿ

ಕುವೈತ ದೇಶದಲ್ಲಿ ಮನೆ ಕೆಲಸಕ್ಕಾಗಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ

ಕಲಬುರಗಿ: ಕುವೈತ ದೇಶದಲ್ಲಿ ಮನೆಕೆಲಸಕ್ಕಾಗಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂತರಾಷ್ಟ್ರೀಯ ವಲಸೆ ಕೇಂದ್ರ ಕರ್ನಾಟಕ ಮುಖಾಂತರ ಕುವೈತ ದೇಶದಲ್ಲಿ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ.

ಅನುಭವಿಗಳು ಮತ್ತು ಹೊಸಬರಿಗೆ ಪಿಸಿಸಿ, ಪಿಡಿಓಟಿ, ಎಮಿಗ್ರೇಷನ್ ಕ್ಲಿಯರನ್ಸ್  ಸೌಲಭ್ಯಗಳು ಇದ್ದು,  ವಯೋಮಿತಿ 30 ರಿಂದ 40 ವರ್ಷದೊಳಗಿರಬೇಕು. ವಿಸಾ, ವಿಸಾ ಸ್ಟಾಂಪಿಂಗ್, ವಿಮಾನ ಟಿಕೆಟ್ ಉಚಿತವಾಗಿದೆ. ಮಾಸಿಕ 30,000 ರಿಂದ 32,000 ರೂ. ವರೆಗೆ ಸಂಬಳ ಇರುತ್ತದೆ. 2 ವರ್ಷದವರೆಗೆ ಒಪ್ಪಂದ ಇರುತ್ತದೆ. ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ  8197674505, 9632214436 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago