ಬಿಸಿ ಬಿಸಿ ಸುದ್ದಿ

ಕಸಾಪದಿಂದ `ಭಾವ ಸಮ್ಮಿಲನ’ ಕಾರ್ಯಕ್ರಮ 21ಕ್ಕೆ

ಕನ್ನಡಿಗರ ಮನದ ಮನೆಯಂತಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಆಯ್ಕೆ ಮಾಡಿ ಕನ್ನಡಮ್ಮನ ಸೇವೆಗೆ ನನ್ನನ್ನು ಅಣಿಗೊಳಿಸಿದ ಜಿಲ್ಲೆಯ ಎಲ್ಲಾ ಕನ್ನಡದ ಮನಸ್ಸುಗಳಿಗೆ ನನ್ನ ಕೃತಜ್ಞತೆಗಳು. ಪರಿಷತ್ತಿನ ಸದಸ್ಯರು ನನ್ನ ಮೇಲಿಟ್ಟ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಪರಿಷತ್ತು ಕನ್ನಡಿಗರ ಮನೆ ಬಾಗಿಲಿಗೆ ಕೊಂಡೊಯ್ಯುವ ದಿಸೆಯಲ್ಲಿ ಕಾರ್ಯತತ್ಪರನಾಗಿದ್ದೇನೆ. – ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷ, ಜಿಲ್ಲಾ ಕಸಾಪ.

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಹಿತ್ಯ ಪ್ರಿಯ ಮನಗಳ ಸಮ್ಮಿಲನಗೊಳ್ಳುವ `ಭಾವ ಸಮ್ಮಿಲನ’ ಎಂಬ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ ಅರ್ಥಪೂರ್ಣ ವರ್ಷಾಚರಣೆಯನ್ನು ನ.21 ರ ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದರು.

ನಗರದ ಕನ್ನಡ ಭವನದಲ್ಲಿ ಶುಕ್ರವಾರ ನಡೆಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಗಲತಿಪ್ಪಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿನಿತ್ಯ ವಿನೂತನ ಕಾರ್ಯಕ್ರಮಗಳ ಮೂಲಕ ಕಲೆ, ಸಾಹಿತ್ಯ, ಸಾಂಸ್ಕøತಿಕ ಮೆರಗನ್ನು ಹೆಚ್ಚಿಸುತ್ತಲಿದೆ. ನಾಡಿನ ಉದಯೋನ್ಮುಖ ಬರಹಗಾರರು, ಕವಿಗಳು, ಕಲಾವಿದರು, ಸಂಗೀತಗಾರರು ಮುಂತಾದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿ ಅವರ ಪ್ರತಿಭೆಯನ್ನು ನಾಡಿಗೆ ಪರಿಚಯಿಸುವ ಕಾರ್ಯ ಪರಿಷತ್ತು ಈ ಒಂದು ವರ್ಷದಲ್ಲಿ ಪ್ರಮಾಣಿಕವಾಗಿ ಮಾಡಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮಗಳನ್ನು ಸಂಘಟಿಸುವುದು ಹೊಸ ಹೊಸ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸುವುದು, ವಿನೂತನ ವಿಶಿಷ್ಟ ಕಾರ್ಯಕ್ರಮಗಳಿಗೆ ಹೆಸರಾಗಿದ್ದು, ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಾಗಿದ್ದು, ಅಧ್ಯಕ್ಷರಾಗಿ ಒಂದು ವರ್ಷದಲ್ಲಿ ನೂರಾರು ರಚನಾತ್ಮಕ ಕಾರ್ಯಕ್ರಮಗಳನ್ನು ಅಯೋಜಿಸಿ ಕೆಲವೇ ದಿನಗಳಲ್ಲಿ ಜಿಲ್ಲೆಯ ಜನತೆಯ ಹೃದಯವನ್ನು ಗೆದ್ದಿವೆ ಎಂದು ಮನದುಂಬಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಒಂದು ವರ್ಷವನ್ನು ಪೂರೈಸುತ್ತಿರುವ ಈ ಶುಭ ಸಂದರ್ಭದಲ್ಲಿ ಕಾರ್ಯಕ್ರಮಗಳ ಪ್ರವಾಹದಲ್ಲಿನ ಕೆಲವು ಪ್ರಮುಖ ಹನಿಗಳನ್ನು ಪರಿಚಯಿಸುವ ಪ್ರಯತ್ನವನ್ನು ಪತ್ರಿಕಾ ಛಾಯಾಗ್ರಾಹಕ ರಾಜು ಕೋಷ್ಟಿ ಸಾರಥ್ಯದ ನವ ಕಲ್ಯಾಣ ವಿಡಿಯೋ ಮತ್ತು ಫೋಟೋಗ್ರಾಫರ್ಸ ಅಸೋಸಿಯೇಷನ್ ವತಿಯಿಂದ ಭಾವಚಿತ್ರಗಳ ಪ್ರದರ್ಶನವೂ ಅಂದು ಜರುಗಲಿದೆ.

ವರ್ಷಪೂರ್ತಿಯಾಗಿ ಪರಿಷತ್ತು ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಮಾಧ್ಯಮದ ಮೂಲಕ ಬೆಳಕು ಕೊಟ್ಟು ನಮ್ಮಲ್ಲಿನ ಉತ್ಸಾಹ ತುಂಬಿ ಪ್ರೋತ್ಸಾಹಿಸುತ್ತಿರುವ ಪತ್ರಿಕಾ ರಂಗದ ಪ್ರಮುಖರಾದ ವಾದಿರಾಜ ವ್ಯಾಸಮುದ್ರ, ಸ.ದಾ.ಜೋಶಿ, ರಾಮಕೃಷ್ಣ ಬಡಶೇಷಿ, ದೇವಯ್ಯಾ ಗುತ್ತೇದಾರ, ಶೇಷಮೂರ್ತಿ ಅವಧಾನಿ, ರಾಹುಲ್ ಬೆಳಗಲಿ, ಹಣಮಂತರಾವ ಭೈರಾಮಡಗಿ, ಕುಮಾರ ಬುರಡಿಕಟ್ಟಿ, ಟಿ.ಗಣೇಶಕುಮಾರ, ಸಂತೋಷ ನಾಡಗಿರಿ ಅವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸತ್ಕರಿಸಲಾಗುವುದೆಂದು ತೇಗಲತಿಪ್ಪಿ ವಿವರಿಸಿದರು.

ಕಾರ್ಯಕ್ರಮದ ಯಶಸ್ವಿಗೆ ಪೂರಕವಾಗಿ ರಚಿಸಲಾಗಿರುವ ವರ್ಷಾಚರಣೆ ಸಮಿತಿಗೆ ಅಧ್ಯಕ್ಷರನ್ನಾಗಿ ಸಂಶೋಧಕ ಮುಡುಬಿ ಗುಂಡೇರಾವ, ಗೌರವಾಧ್ಯಕ್ಷರಾಗಿ ಕಲ್ಯಾಣಕುಮಾರ ಶೀಲವಂತ, ಜಗದೀಶ ಮರಪಳ್ಳಿ, ಶರಣರಾಜ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ವಿದ್ಯಾಸಾಗರ ದೇಶಮುಖ, ಸಿದ್ಧಲಿಂಗ ರೆಡ್ಡಿ ಪಾಟೀಲ, ಅಶೋಕ ಮಾಲಿ ಅವರನ್ನು ನೇಮಕ ಮಾಡಲಿದ್ದು, ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಅವರು ಸಮಾರಂಭ ಉದ್ಘಾಟಿಸಲಿದ್ದು, ವರ್ಷ ಪೂರೈಕೆಯಾಗುತ್ತಿರುವುದರಿಂದ ಆ ಅವಧಿಯಲ್ಲಿ ಪರಿಷತ್ತು ಸಾಗಿ ಬಂದ ದಾರಿಯ ಸಿಂಹಾವಲೋಕನ ದಾಖಲೆಯಾಗಲೆಂದು ಮಹಾದಾಸೆಯಿಂದ ಹೊರತರುತ್ತಿರುವ ಲೇಖಕ ಡಾ. ಕೆ.ಗಿರಿಮಲ್ಲ ಅವರು ಬರೆದ `ವಿಜಯೋತ್ಸಾಹ’ ಎಂಬ ಕೃತಿಯನ್ನು ಗುಲಬರ್ಗ ವಿವಿ ಯ ಕುಲಪತಿ ಪ್ರೊ. ದಯಾನಂದ ಅಗಸರ ಜನಾರ್ಪಣೆ ಮಾಡಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ರಾಜು ಲೇಂಗಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅವರು ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ದ ಪದಾದಿಕಾರಿಗಳಾದ ಶಿವರಾಜ ಎಸ್.ಅಂಡಗಿ, ಶರಣರಾಜ್ ಛಪ್ಪರಬಂದಿ, ರವೀಂದ್ರಕುಮಾರ ಭಂಟನಳ್ಳಿ, ಕಲ್ಯಾಣಕುಮಾರ ಶೀಲವಂತ, ವಿದ್ಯಾಸಾಗರ ದೇಶಮುಖ, ರಾಜೇಂದ್ರ ಮಾಡಬೂಳ, ನಾಗಪ್ಪ ಸಜ್ಜನ್, ಸಂತೋಷ ಕುಡಳ್ಳಿ, ಶಾಮಸುಂದರ ಕುಲಕರ್ಣಿ ಸೇರಿದಂತೆ ಅನೆಕರು ಉಪಸ್ಥಿತರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

16 hours ago