ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

0
36

ಕಲಬರುಗಿ: ಕೃಷಿ ಮೇಳದ ಪ್ರಯುಕ್ತ ಶ್ರೇಷ್ಠ ಕೃಷಿಕ/ಕೃಷಿ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು 2023ರ ಜನವರಿ ತಿಂಗಳಿನಲ್ಲಿ ರಾಯಚೂರು ಮುಖ್ಯ ಆವರಣದಲ್ಲಿ “ಕೃಷಿಮೇಳ”ವನ್ನು ಆಯೋಜಿಸುತ್ತಿದ್ದು, ಈ ಮೇಳದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪ್ರತಿ ಜಿಲ್ಲೆಗೆ ಶ್ರೇಷ್ಠ ಕೃಷಿಕ ಹಾಗೂ ಕೃಷಿ ಮಹಿಳೆಯನ್ನು ಗುರುತಿಸಿ ಪ್ರಮಾಣ ಪತ್ರವನ್ನು ನೀಡಿ ಸನ್ಮಾನಿಸಲಾಗುತ್ತದೆ.

Contact Your\'s Advertisement; 9902492681

ನಿಗದಿತ ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರ ಅಥವಾ ವಿಶ್ವವಿದ್ಯಾಲಯದ www.uasraichur.edu.in ವೆಬ್‍ಸೈಟ್ ದಿಂದ ಪಡೆದು ಭರ್ತಿ ಮಾಡಿ 2022ರ ಡಿಸೆಂಬರ್ 12 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರನ್ನು ಹಾಗೂ ಮೊಬೈಲ್ ಸಂಖ್ಯೆ 9480696315, 9480519313 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here