ಕಲಬುರಗಿ: ನಂದಿನಿ ಹಾಲು ಮತ್ತು ಮೊಸರಿನ ಬೆಲೆ ಲೀಟರಗೆ ಎರಡು ರೂಪಾಯಿ ಹೆಚ್ಚಿಸಿರುವುದು ಅಖಿಲ ಭಾರತ ಯುವಜನ ಒಕ್ಕೂಟ ಜಿಲ್ಲಾ ಅಧ್ಯಕ್ಷರಾದ ನ್ಯಾಯವಾದಿ ಹಣಮಂತರಾಯ ಎಸ್. ಅಟ್ಟೂರ ಖಂಡಿಸಿದ್ದಾರೆ.
ಈಗಾಗಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಮನೆಯ ಅಡುಗೆ ವಸ್ತುಗಳ ಬೆಲೆ ಗಗನಕೇರಿದರಿ೦ದ ಜನ ತತ್ತರಿಸಿದ್ದಾರೆ. ಇಂತಹ ಸಮಯದಲ್ಲಿ ಸರಕಾರ ಹಾಲಿನ ಬೆಲೆಯು ಹೆಚ್ಚಿಸಿ ಜನರ ನೋವಿನ ಮೇಲೆ ಬರೆ ಎಳೆದ೦ತಾಗಿದೆ.
ಚುನಾವಣೆ ಸಂದರ್ಭದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ನಿರುದ್ಯೋಗಗಳಿಗೆ ಉದ್ಯೋಗ ಸೃಷ್ಟಿ ಮಾಡಿ ಉದ್ಯೋಗ ನೀಡುತ್ತೇವೆಂದ ಮಾತು ಎಲ್ಲಿ ಹೋಯಿತು ? ಸರ್ಕಾರ ಮರೆತು ಬಿಟ್ಟಿತೆ? ಅಥವಾ ಹಲವಾರು ಯುವಕರು ಉದ್ಯೋಗವಿಲ್ಲದೆ ಅಪರಾಧ ಕ್ರಿಯೆಯಲ್ಲಿ ತೊಡಗಿರುವ ಯುವಕರು ಮರೆತುಬಿಟ್ಟರೆ? ಇದು ಗ೦ಭೀರವಾದ ವಿಷಯ ಸರಕಾರ ಮೊದಲು
ಹೆಚ್ಚಿರುವ ಬೆಲೆ ಕಡಿಮೆ ಮಾಡಿ ಬಡಜನರು ನೆಮ್ಮದಿಯಿಂದ ಬದುಕುವ ಹಾಗೆ ನೋಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕಲ್ಯಾಣ ಕನಾ೯ಟಕ ಭಾಗದ ಹೆಸರು ಬದಲಾವಣೆ ಆಯಿತು. ಆದರೆ ಅಭಿವೃದ್ಧಿಯಲ್ಲಿ ಬದಲಾವಣೆ ಆಗಲೇ ಇಲ್ಲ. ಈ ಭಾಗದ ಹಲವು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುವ ಮೂಲಕ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದ್ದಾರೆ.
ಹೈದರಾಬಾದ ಕನಾ೯ಟಕ ಪ್ರದೇಶದ ಅಭಿವೃದ್ಧಿಗಾಗಿ 371 (ಜೆ)ಕಲಮ್ ಸಮಪ೯ಕವಾಗಿ ಜಾರಿಗೊಳಿಸಿ ಈ ಭಾಗಕ್ಕೆ ನ್ಯಾಯ ದೊರಕಿಸಿಕೊಡಬೇಕೆ೦ದು ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…