ಚುನಾವಣಾ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನ.30ಕ್ಕೆ

0
11

ಕಲಬುರಗಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನವೆಂಬರ್ 30 ರಂದು ಕಲಬುರಗಿಗೆ ಆಗಮಿಸಲಿದ್ದು, ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಕುರಿತ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಹೇಳಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಸಂವಾದಕ್ಕೆ ವಿದ್ಯಾರ್ಥಿಗಳು, ಪತ್ರಕರ್ತರು, ವಕೀಲರು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅಗತ್ಯ ಸಲಹೆ ನೀಡಬಹುದಾಗಿದೆ. ಇದಲ್ಲದೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಸಹ ಅಂದಿನ ಸಂವಾದಕ್ಕೆ ಆಹ್ವಾನಿಸಲಾಗುತ್ತಿದೆ ಎಂದರು.

Contact Your\'s Advertisement; 9902492681

ಸಂವಾದ ಕಾರ್ಯಕ್ರಮ ಯಶಸ್ಸಿಗೆ ಎಲ್ಲರು ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಕಾನೂನು, ರಾಜಶಾಸ್ತ್ರ, ಇತರೆ ಪದವಿ ವಿದ್ಯಾರ್ಥಿಗಳನ್ನು ಕರೆತರುವಂತೆ ಸಭೆಯಲ್ಲಿ ಭಾಗವಹಿಸಿದ ಗುಲಬರ್ಗಾ ವಿ.ವಿ. ಕುಲಪತಿ ಪ್ರೊ. ದಯಾನಂದ ಅಗಸರ್ ಮತ್ತು ಶ್ರೀ ಶರಣಬಸವೇಶ್ವರ ವಿ.ವಿ. ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ತಿಳಿಸಿದರು.

ಸಭೆಯಲ್ಲಿ ಜಿಪಂ. ಸಿ.ಇ.ಓ ಡಾ. ಗಿರೀಶ್ ಡಿ. ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತರಾದ ಮಮತಾ ಕುಮಾರಿ, ಕಾರ್ತಿಕ್, ಚುನಾವಣಾ ತಹಶೀಲ್ದಾರ ಮಹಾಂತೇಶ ಮುಡಬಿ, ಕಲಬುರಗಿ ತಹಶೀಲ್ದಾರ ಪ್ರಕಾಶ ಕುದರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶೀ ಸಂಗಮನಾಥ ರೇವತಗಾಂವ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here