ಬಿಸಿ ಬಿಸಿ ಸುದ್ದಿ

ಚುನಾವಣಾ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನ.30ಕ್ಕೆ

ಕಲಬುರಗಿ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನವೆಂಬರ್ 30 ರಂದು ಕಲಬುರಗಿಗೆ ಆಗಮಿಸಲಿದ್ದು, ಅಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಚುನಾವಣೆ ವ್ಯವಸ್ಥೆಯಲ್ಲಿ ಸುಧಾರಣೆಗಳ ಅಗತ್ಯತೆ ಕುರಿತ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಹೇಳಿದರು.

ಗುರುವಾರ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಸಂವಾದಕ್ಕೆ ವಿದ್ಯಾರ್ಥಿಗಳು, ಪತ್ರಕರ್ತರು, ವಕೀಲರು, ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಿ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಅಗತ್ಯ ಸಲಹೆ ನೀಡಬಹುದಾಗಿದೆ. ಇದಲ್ಲದೆ ಜಿಲ್ಲೆಯ ಜನಪ್ರತಿನಿಧಿಗಳನ್ನು ಸಹ ಅಂದಿನ ಸಂವಾದಕ್ಕೆ ಆಹ್ವಾನಿಸಲಾಗುತ್ತಿದೆ ಎಂದರು.

ಸಂವಾದ ಕಾರ್ಯಕ್ರಮ ಯಶಸ್ಸಿಗೆ ಎಲ್ಲರು ಕಾರ್ಯನಿರ್ವಹಿಸಬೇಕು. ವಿಶೇಷವಾಗಿ ಕಾನೂನು, ರಾಜಶಾಸ್ತ್ರ, ಇತರೆ ಪದವಿ ವಿದ್ಯಾರ್ಥಿಗಳನ್ನು ಕರೆತರುವಂತೆ ಸಭೆಯಲ್ಲಿ ಭಾಗವಹಿಸಿದ ಗುಲಬರ್ಗಾ ವಿ.ವಿ. ಕುಲಪತಿ ಪ್ರೊ. ದಯಾನಂದ ಅಗಸರ್ ಮತ್ತು ಶ್ರೀ ಶರಣಬಸವೇಶ್ವರ ವಿ.ವಿ. ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ತಿಳಿಸಿದರು.

ಸಭೆಯಲ್ಲಿ ಜಿಪಂ. ಸಿ.ಇ.ಓ ಡಾ. ಗಿರೀಶ್ ಡಿ. ಬದೋಲೆ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಸಹಾಯಕ ಆಯುಕ್ತರಾದ ಮಮತಾ ಕುಮಾರಿ, ಕಾರ್ತಿಕ್, ಚುನಾವಣಾ ತಹಶೀಲ್ದಾರ ಮಹಾಂತೇಶ ಮುಡಬಿ, ಕಲಬುರಗಿ ತಹಶೀಲ್ದಾರ ಪ್ರಕಾಶ ಕುದರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ರಾಜ್ಯ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ, ಪ್ರಧಾನ ಕಾರ್ಯದರ್ಶೀ ಸಂಗಮನಾಥ ರೇವತಗಾಂವ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

emedialine

Recent Posts

ಕೌಶಲ್ಯ ಕಲಿಕೆಯಿಂದ ಉತ್ತಮ ಅವಕಾಶ: ಪ್ರೊ. ರಾಜನಾಳ್ಕರ್ ಲಕ್ಷ್ಮಣ

ಗುವಿವಿಯಲ್ಲಿ ಪತ್ರಿಕಾ ದಿನಾಚರಣೆ ಹಾಗೂ ವಿದ್ಯಾರ್ಥಿ ಸಂಘ ಉದ್ಘಾಟನೆ ಕಲಬುರಗಿ: ಪ್ರಸ್ತುತ ಪತ್ರಿಕೋದ್ಯಮ ಕ್ಷೇತ್ರ ವಿಸ್ತಾರವಾಗಿ ಬೆಳೆದಿದ್ದು, ಉದ್ಯೋಗ ಹೆಚ್ಚು…

2 hours ago

ಕಲ್ಯಾಣ ಕರ್ನಾಟಕ ಪ್ರಶಸ್ತಿಗೆ ಸುಭಾಷ್ ಬಣಗಾರ, ನಾಗಪ್ಪ ಮಾಲಿಪಾಟೀಲ್ ಶಿವ ಸಂಪದ ಆಯ್ಕೆ

ಸೇಡಂ: ಇಲ್ಲಿಯ ಬೊಮ್ನಳ್ಳಿ ಸುದ್ದಿ ಪ್ರತಿಷ್ಠಾನ ವತಿಯಿಂದ 2024 ನೇ ಸಾಲಿನ ಕಲ್ಯಾಣ ಕರ್ನಾಟಕ ಪತ್ರಕರ್ತ ಪ್ರಶಸ್ತಿಗೆ ಇಬ್ಬರು ಪತ್ರಕರ್ತರಾದ…

2 hours ago

ಹಟ್ಟಿ ಪಟ್ಟಣಕ್ಕೆ ಪದವಿ ಕಾಲೇಜು ಮಂಜೂರುಗೆ ಒತ್ತಾಯಿಸಿ ಸಂಸದರಿಗೆ ಎಸ್ಎಫ್ಐ ಆಗ್ರಹ

ಹಟ್ಟಿ: ಪಟ್ಟಣಕ್ಕೆ ಪದವಿ ಕಾಲೇಜನ್ನು ಮಂಜೂರು ಮಾಡಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಯಚೂರು ಜಿಲ್ಲಾ ಸಮಿತಿಯಿಂದ…

3 hours ago

ಚಿತ್ತಾಪುರ: ಮುಖ್ಯಗುರು ಅಮಾನತಿಗೆ ಒತ್ತಾಯ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಪಟ್ಟಣದ ನಾಗಾವಿ ಕ್ಯಾಂಪಸ್‌'ನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರು ಹಾಗೂ ಅಡುಗೆ ಸಿಬ್ಬಂದಿಯವರನ್ನು ಕೂಡಲೇ…

3 hours ago

ವಾಡಿ: ಜನಸ್ಪಂದನ ಸಭೆ ಹಕ್ಕುಪತ್ರ ಮೂಲಭೂತ ಸೌಕರ್ಯ ಒದಗಿಸಲು ಮನವಿ

ವಾಡಿ: ಕಳೆದ 40 ವರ್ಷಗಳ ನಮ್ಮ ಬೇಡಿಕೆಯಾದ ಸ್ಥಳೀಯ ನಿವಾಸಿಗಳಿಗೆ ನಿವೇಶನದ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಪುರಸಭೆ ಆಡಳಿತ ಕರ್ಯಪ್ರವರ್ತರಾಗಬೇಕು…

4 hours ago

ಕಲಬುರಗಿ: ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಪ್ರಭು ದೊರೆ

ಕಲಬುರಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ…

8 hours ago