ಬಿಸಿ ಬಿಸಿ ಸುದ್ದಿ

ಡಾ. ಅಂಬೇಡ್ಕರ್ ಮತ್ತು ಸಂವಿಧಾನದ ಓದು ಇಂದಿನ ಅಗತ್ಯ

ಕಲಬುರಗಿ: ಓದು ಅನ್ನುವುದು ವಿಶಿಷ್ಟ ಪ್ರಪಂಚ. ಓದು ಎಂದರೆ ಕೇವಲ ಬರಹವನ್ನು ಓದುವುದಲ್ಲ. ಅದರಲ್ಲಿರುವ ವಿಷಯವನ್ನು ಅರ್ಥ ಮಾಡಿಕೊಳ್ಳುವುದು. ಆ ಹಿನ್ನೆಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಓದಬೇಕು ಎಂದು ಪತ್ರಕರ್ತ-ಲೇಖಕ ಡಾ. ಶಿವರಂಜನ ಸತ್ಯಂಪೇಟೆ ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಆರಾಧನಾ ಕಲಾ ಮತ್ತು ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಗುರುವಾರ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಇಂದು ಹತ್ತು ಹಲವು ಸಮಸ್ಯೆ ಸವಾಲುಗಳನ್ನು ಎದುರಿಸುತ್ತಿದ್ದು, ಸಂವಿಧಾನದ ಹಕ್ಕುಗಳನ್ನು ಬಳಸಿಕೊಂಡು ಸಂವಿಧಾನದ ವಿರೋಧಿ ನಿಲುವುಗಳನ್ನು ಅನುಷ್ಠಾನಗೊಳಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಓದು ಅಗತ್ಯವಾಗಿದೆ ಎಂದು ತಿಳಿಸಿದರು.

ಅಂಬೇಡ್ಕರ್ ಇಲ್ಲದ ಭಾರತವನ್ನು ಊಹಿಸುವುದೂ ಕಷ್ಟ. ಈ ದೇಶದ ಮೂಲಸಮಸ್ಯೆಗಳಿಗೆ ನಮ್ಮೆಲ್ಲರಲ್ಲಿರುವ ಅಜ್ಞಾನವೇ ಮೂಲ ಕಾರಣವಾಗಿದೆ. ಸಂವಿಧನ ಉಳಿದರೆ ನಮ್ಮ ಉಳಿವು ಎಂÀ್ಬುದನ್ನು ಅರಿತು ಅಂಬೇಡ್ಕರ್ ಅವರ ಆಶಯಗಳನ್ನು ಅನುಷ್ಠಾನಗೊಳಿಸಬೇಕು ಎಂದು ವಿವರಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕರದ ಮಾಜಿ ಸದಸ್ಯ ಸುರೇಶ ಬಡಿಗೇರ ಅತಿಥಿ ಉಪನ್ಯಾಸ ನೀಡಿ, ಜಾತಿಯ ಅರ್ಬುದ ದೇಶಕ್ಕೆ ಅಂಟಿದ ಮಹಾರೋಗವಾಗಿದ್ದು, ಅಸ್ಪøಶ್ಯತೆ, ಸಮಾನತೆಯ ವಿರುದ್ಧ ಹೋರಾಡಿದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಬದುಕಉ ಹಾಗೂ ಅವರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೆಕು ಎಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ಹಾಗೂ ಪ್ರ್ರಾಚಾರ್ಯ ಚೇತನಕುಮಾರ ಗಾಂಗಜಿ ಅಧ್ಯಕ್ಷತೆ ವಹಿಸಿದ್ದರು. ಇದೇವೇಳೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಓದು ಅಭಿಯಾನ ನಿಮಿತ್ತ ಕೈಗೊಂಡಿದ್ದ ಆಶುಭಾಷಣ, ರಸಪ್ರಶ್ನೆ, ಪ್ರಬಂಧ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ವಿತರಿಸಲಾಯಿತು.

ಉಪನ್ಯಾಸಕ ಅಂಬಾರಾಯ ಹಾಗರಗಿ, ಆಡಳಿತಾಧಿಕಾರಿ ಭೀಮರಾವ ಪಾಟೀಲ ವೇದಿಕೆಯಲ್ಲಿದ್ದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕ ದತ್ತಪ್ಪ ಸಾಗನೂರ ಪ್ರಾಸ್ತಾವಿಕ ಮಾತನಡಿದರು. ಪ್ರಿಯಾಂಕಾ ಪ್ರಾರ್ಥನೆಗೀತೆ ಹಾಡಿದರು. ಸುಭಾಷ ವಗ್ಗನ್ ಸ್ವಾಗತಿಸಿದರು. ಕಾಶಿನಾಥ ಪಾಟೀಲ ವಂದಿಸಿದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

9 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

9 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

9 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

9 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

9 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

9 hours ago