ಬಿಸಿ ಬಿಸಿ ಸುದ್ದಿ

ಸಮಯ ಗತಿಸಿದರೆ ಮರಳಿ ಬರುವದಿಲ್ಲ: ಡಾ.ಲಿಂಗರಾಜ ಶಾಸ್ತ್ರಿ

ಕಲಬುರಗಿ: ಕಳೆದು ಹೋದ ಸಮಯ ಪುನ: ಮರಳಿ ಬರುವದಿಲ್ಲ. ಅದು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಮಯಕ್ಕೆ ನಿರ್ಲಕ್ಷ್ಯ ಮಾಡದೇ. ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ಸಮರ್ಥವಾಗಿ ಬಳಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂದು ಶರಣಬಸವ ವಿವಿಯ ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ ಹೇಳಿದರು.

ನಗರದ ಶರಣಬಸವ ವಿವಿ ಶತಮಾನೋತ್ಸವ ಸಭಾಂಗಣದಲ್ಲ್ಲಿ ಬುಧವಾರ ಆಯೋಜಿಸಿದ್ದ ಇಂಡಕ್ಷನ್ (ದೀಕ್ಷಾರಂಭ-೨೦೧೯) ಕಾರ್ಯಕ್ರಮದಲ್ಲಿ ಸಮಯದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳು ಅಧ್ಯಯನ ಮಾಡುವ ಸಮಯದಲ್ಲಿ ಸಮಯಕ್ಕೆ ನಿರ್ಲಕ್ಷ್ಯ ಮಾಡಿದರೇ ಅವರ ಭವಿಷ್ಯವೇ ಅತಂತ್ರವಾಗುತ್ತದೆ. ಆದರೆ ಯಾರು ಜಾಣ್ಮೆಯಿಂದ ಸಮಯಕ್ಕೆ ಬೆಲೆಕೊಟ್ಟು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡುತ್ತಾರೋ, ಅಂತಹ ವಿದ್ಯಾರ್ಥಿಗಳು ಉನ್ನತ ಸ್ಥಾನ ಮತ್ತು ಯಶಸ್ವಿ ಜೀವನ ನಡೆಸುವುದಕ್ಕೆ ಸಾಧ್ಯ ಎಂದು ವಿದ್ಯಾರ್ಥಿಗಳಿಗೆ ಸಮಯದ ಬಗ್ಗೆ ಅರಿವು ಮೂಡಿಸಿದರು.

ವಿದ್ಯಾರ್ಥಿಗಳಲ್ಲಿ ದೃಢ ನಿರ್ಧಾರ, ಆತ್ಮ ವಿಶ್ವಾಸ ಸತತ ಪ್ರಯತ್ನ ಕರಗತ ಮಾಡಿಕೊಂಡಾಗ ಮಾತ್ರ ಜ್ಞಾನ ತಮ್ಮದಾಗಿಸಿಕೊಳ್ಳಬಹುದಾಗಿದೆ. ಆದರೆ ಇಂದಿನ ವಿದ್ಯಾರ್ಥಿಗಳು ಕೇವಲ ದೊಡ್ಡ, ದೊಡ್ಡ ಕನಸು ಕಾಣುತ್ತಾರೇ ವಿನಹ: ಅದರ ತಕ್ಕಂತೆ ಕಠಿಣ ಪರಿಶ್ರಮದ ಅಧ್ಯಯನ ಮಾಡುವದಿಲ್ಲ. ಎಂದು ಡಾ.ಲಿಂಗರಾಜ ಶಾಸ್ತ್ರಿ ಬೇಸರ ವ್ಯಕ್ತಪಡಿಸಿದರು.

ಡಾ.ಶಿವರಾಜ ಶಾಸ್ತ್ರಿ ಮಾತನಾಡಿ, ವಿದ್ಯಾರ್ಥಿಗಳು ಗುರುಹಿರಿಯರನ್ನು ಮೊದಲು ಗೌರವಿಸುವುದನ್ನು ಕಲಿಯಬೇಕು. ತಂದೆ ತಾಯಿಯನ್ನು ಪೂಜಿಸಿಬೇಕು. ಸರಸ್ವತಿಯನ್ನು ಆರಾಧಿಸಿ, ಸರಿಯಾದ ಸಮಯಕ್ಕೆ ವಿದ್ಯಾಮಂದಿರದೊಳಗೆ ಬಂದು ಸಂಸ್ಥೆಯ ಮತ್ತು ನಾಡಿನ, ದೇಶದ ರಾಷ್ಟ್ರಗೀತೆ ಹಾಡುವ ಮೂಲಕ ಶಾಲೆಯಲ್ಲಿ ಆಟ, ಮನರಂಜನೆಯ ಜೊತಗೆ ಅಧ್ಯಯನ ಮಾಡಬೇಕು. ಅಂದಾಗ ಮಾತ್ರ ವಿದ್ಯೆ ಅಭ್ಯಾಸಿಗನ ಕೈವಶವಾಗುತ್ತದೆ ಎಂದು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು ಬಿತ್ತಿದರು.

ಮುಕ್ತಾಂಬಿಕ ಕಾಲೇಜು ಪ್ರಾಚಾರ್ಯ ಎಮ್.ಆರ್ ಹುಗ್ಗಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡುವ ಜತೆಗೆ ಮಾನವೀಯ ಮೌಲ್ಯಗಳು ಕಲಿಸಬೇಕು. ದೈಹಿಕ ವ್ಯಾಯಾಮ, ಯೋಗ, ಆಧ್ಯಾ೦೯ತ್ಮಿಕ ಶಿಕ್ಷಣ ನೀಡುವದರಿಂದ ಮಕ್ಕಳ ಬುದ್ದಿಮಟ್ಟ ಬೆಳವಣಿಗೆಯಾಗುವುದಕ್ಕೆ ಪ್ರೇರಣೆ ನೀಡುತ್ತದೆ ಎಂದರು.
ವಿವಿಯ ಸಮ ಕುಲಪತಿ ವಿಡಿ ಮೈತ್ರಿ, ವಿವಿ ಕುಲಸಚಿವ ಡಾ. ಅನೀಲ ಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ.ಲಕ್ಷ್ಮಿ ಮಾಕಾ ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago