ಹೈದರಾಬಾದ್ ಕರ್ನಾಟಕ

ಕೃಷಿ ಇಲಾಖೆಗಳ ವಿಲೀನಕ್ಕೆ ಕರ್ನಾಟಕ ಪ್ರಾಂತ ರೈತ ಸಂಘ ವಿರೋಧ

ಕಲಬುರಗಿ: ರೈತರ ಜೀವನಾಡಿಯಾಗಿರುವ ರೇಷ್ಮೆ ಇಲಾಖೆ ಮತ್ತು ತೋಟಗಾರಿಕೆ ಇಲಾಖೆಯನ್ನು ಕೃಷಿ ಇಲಾಖೆಗೆ ವಿಲೀನಗೊಳಿಸುತ್ತಿರುವ ಸರಕಾರದ ಕ್ರಮ ರೈತ ವಿರೋಧಿಯಾಗಿದೆ. ಇಂತಹ ರೈತ ವಿರೋಧಿ ನೀತಿಯನ್ನು ಕೂಡಲೇ ಸರಕಾರ ಹಿಂಪಡೆಯಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪಾ  ಮಮಶೆಟ್ಟಿ ಆಗ್ರಹಿಸಿದ್ದಾರೆ.

ರೇಷ್ಮೆ ಕೃಷಿಯು ನಮ್ಮ ದೇಶದ ಗ್ರಾಮೀಣ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಕೃಷಿಯಾಧಾರಿತ ಉದ್ಯಮವಾಗಿದೆ. ಹೆಚ್ಚಿನ ಉದ್ಯೋಗಾವಕಾಶ ನಿಗಧಿತ ಆದಾಯ ಮಹಿಳಾ ಸ್ನೇಹಿಯೂ ಆಗಿರುವುದರಿಂದ ನಿರುದ್ಯೋಗಿ ವಿದ್ಯಾವಂತ ಯುವಜನತೆ ಸಹ ಹೆಚ್ಚಿನ‌ ಸಂಖ್ಯೆಯಲ್ಲಿ ರೇಷ್ಮೆ ಬೆಳೆಯನ್ನು ಅವಲಂಬಿಸಿ, ಜೀವನ ನಡೆಸುತ್ತಿದ್ದಾರೆ. ರೇಷ್ಮೆ ಉತ್ಪಾದನೆಯಲ್ಲಿ ದೇಶದಲ್ಲಿ ಕರ್ನಾಟಕ ರಾಜ್ಯ ಪ್ರಥಮ ಸ್ಥಾನ ಪಡೆದಿದೆ.

ದೇಶದ ರೇಷ್ಮೆ ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇಕಡಾ 60 ರಷ್ಟು ಇದೆ. ರಾಜ್ಯದ ರೇಷ್ಮೆ ಇಲಾಖೆ ಮುಚ್ಚುವುದರಿಂದ 2346 ಹುದ್ದೆಗಳು ರದ್ದಾಗಲಿವೆ. ಇದು ಸರಕಾರದ ಮೂರ್ಖತನದ ಕೆಲಸವಾಗಿದೆ. ಇದರಿಂದ ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಮೇಲೆ ಅವಲಂಬಿಸಿರುವ ಕುಟುಂಬಗಳು ಬಿದಿಗೆ ಬಿಳಲಿವೆ. ರೇಷ್ಮೆ ಉತ್ಪಾದನೆಯಲ್ಲಿ ತೊಡಗಿರುವ ರೇಷ್ಮೆ ಬೆಳೆಗಾರರ ಬದುಕು ಶೋಚನೀಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ರೇಷ್ಮೆ ವಿಸ್ತರಣೆ ಆಗುತ್ತಿರುವಾಗ ಇಡೀ ಇಲಾಖೆಯನ್ನೇ ಮುಚ್ಚುತ್ತಿರುವುದು ಈ ಭಾಗದ ಜನರಿಗೆ ಅನ್ಯಾಯ ಮಾಡಿದಂತಾಗುತ್ತದೆ. ತೋಟಗಾರಿಕೆ ವ್ಯವಸಾಯದಲ್ಲಿ ತರಕಾರಿ ವ್ಯಾಪಾರ, ಹೂವು ಮಾರಾಟ ಸೇರಿದಂತೆ ವಿವಿಧ ರೀತಿಯ ಹಸಿ ತರಕಾರಿ ಬೆಳೆದು ರೈತರು ತಮ್ಮ ಬದುಕಿನ ಬಂಡಿ ಸಾಗಿಸುತ್ತಿದ್ದಾರೆ. ಆದರೆ ಸರಕಾರ ಇಲಾಖೆಯನ್ನು ಏಕಾಏಕಿ ಮುಚ್ಚುವದರಿಂದ ತೋಟಗಾರಿಕೆ ಸಿಬ್ಬಂದಿಗಳು, ರೈತರು, ತರಕಾರಿ, ವ್ಯಾಪಾರಸ್ಥರು ಅವಲಂಬಿಸಿರುವ ಕಸಬು ಕೂಡ ಕಳೆದುಕೊಂಳ್ಳುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯಲ್ಲಿ ತೊಗರಿ ಬೆಳೆಗೆ ನೆಟೆ ರೋಗ ಬಂದು ತೊಗರಿ ಬೆಳೆಗಾರರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಬಾರಿ ಇಳುವರಿ ಕೂಡ ಕಡಿಮೆ ಬರುವುದೆಂದು ಅಂದಾಜಿಸಲಾಗಿದೆ. ಇದರಿಂದ ಸರಕಾರ ತೊಗರಿ ಬೆಳೆಗಾರರ ಸಂರಕ್ಷಣೆಗೆ ಮುಂದಾಗಬೇಕು. ಬೆಂಬಲ ಬೆಲೆ ನೀಡಬೇಕು. ಬೆಳೆದ ಎಲ್ಲ ತೊಗರಿ ಸರಕಾರ ಖರೀದಿಸಬೇಕು ಮತ್ತು ರೇಷ್ಮೆ ಮತ್ತು ತೋಟಗಾರಿಕೆ ಇಲಾಖೆ ಕೃಷಿ ಇಲಾಖೆಯಲ್ಲಿ ವಿಲೀನ ಮಾಡುವುದನ್ನು ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಸಾಯಬಣ್ಣಾ ಗುಡುಬಾ ಎಚ್ಚರಿಕೆ ನೀಡಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago