ಶಹಾಬಾದ:ನಗರದ ಸರಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು (18 ವರ್ಷ ಪೂರೈಸುವವರು) ಮತದಾರರ ಪಟ್ಟಿಗೆ ನೊಂದಾಯಿಸಲು ಸೂಕ್ತ ಅವಕಾಶವಿದ್ದು ಅದರ ಸಂಪೂರ್ಣ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು ಮಕ್ಕಳಿಗೆ ತಿಳಿಹೇಳಬೇಕೆಂದು ಉಪತಹಸೀಲ್ದಾರ ಮಲ್ಲಿಕಾರ್ಜುನರೆಡ್ಡಿ ಹೇಳಿದರು.
ಅವರು ಬುಧವಾರ ನಗರದ ವಿವಿಧ ಕಾಲೇಜುಗಳಿಗೆ ಬೇಟಿ ನೀಡಿ ಮದತಾರರ ಪಟ್ಟಿಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಲು ಯುವ ಮತದಾರರ ನೊಂದಣಿ ಅಗತ್ಯ ಅಭಿಯಾನ ಕೈಗೊಂಡು ಮಾತನಾಡಿದರು.
18 ವರ್ಷ ಪೂರೈಸುವವರ ವಿದ್ಯಾಥಿಗಳ ದಾಖಲೆಗಳನ್ನು ಒದಗಿಸಿದರೇ ನಮ್ಮ ಇಲಾಖೆ ವತಿಯಿಂದ ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು.ಅಲ್ಲದೇ ವಿದ್ಯಾರ್ಥಿಗಳಿಗೆ ಅವರವರ ಮೊಬೈಲಿನಲ್ಲಿ ವೋಟರ್ ಹೆಲ್ತ್‍ಲೈನ್ ಅಪ್ ಅಪ್‍ಲೋಡ್ ಮಾಡಿಸಿ ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಬಹುದು. ಭಾರತದ ಪ್ರಜಾಪ್ರಭುತ್ವ ಸದೃಢಗೊಳಿಸಲು ಪ್ರತಿಯೊಬ್ಬ ಯುವಕರು ಮತದಾನ ಮಾಡಿ ಒಳ್ಳೆ ಸರ್ಕಾರವನ್ನು ನಿರ್ಮಿಸುವದು ನಮ್ಮೆಲ್ಲರ ಕರ್ತವವಾಗಿದೆ.ಅದಕ್ಕಾಗಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಇದಕ್ಕೆ ಸಹಕಾರ ನೀಡಬೇಕೆಂದು ತಿಳಿಸಿದರು.
ಸಿಎ ಇಂಗಿನಶೆಟ್ಟಿ ಕಾಲೇಜಿನ ಪ್ರಾಂಶುಪಾಲ ರಾಜಗೋಪಾಲ ಜೂಜಾರೆ ಮಾತನಾಡಿ, ಮೊಬೈಲಿನಲ್ಲಿ ವೋಟರ್ ಹೆಲ್ತ್‍ಲೈನ್ ಅಪ್‍ಲೋಡ್ ಮಾಡಿಸಿ ನೊಂದಣಿ ಮಾಡಲು ಹೋದರೆ ಸರ್ವರ್ ಸಮಸ್ಯೆ ಆಗುತ್ತಿದೆ.ಆದ್ದರಿಂದ ಸರಳ ಉಪಾಯ ಇದ್ದರೇ ತಿಳಿಸಿ ಎಂದರು. ಯಾವುದೇ ತೊಂದರೆ ಅನುಭವಿಸುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ದಾಖಲೆಗಳನ್ನು ನೀಡಿದರೇ ನಮ್ಮ ಸಿಬ್ಬಂದಿಗಳು ಕಾಲೇಜಿಗೆ ಬಂದು ನೊಂದಣಿ ಮಾಡಿಸಿ ಕೊಡುತ್ತಾರೆ ಎಂದು ಹೇಳಿದರು. ಶಿರಸ್ತೆದಾರ ಸಯ್ಯದ್ ಹಾಜಿಸಾಬ, ಶರಣು, ಗಂಗಾಧರ ವಾಗ್ಮೋರೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…