ಶಹಾಬಾದ: ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟದ ವಿರುದ್ಧ ದಂಡ ಪ್ರಯೋಗದ ಎಚ್ಚರಿಕೆ ನೀಡಿದ್ದ ಶಹಾಬಾದ ನಗರಸಭೆ ಇದೀಗ ಅಧಿಕೃತವಾಗಿ ಕಾರ್ಯಾಚರಣೆಯನ್ನೂ ಆರಂಭಿಸಿದೆ. ಈವರೆಗೆ ಮೊದಲ ಹಂತದ ಪ್ರಯತ್ನವಾಗಿ ನಿμÉೀಧಿತ ಪ್ಲಾಸ್ಟಿಕ್ ಬಳಸಬೇಡಿ, ಮಾರಾಟ ಮಾಡಬೇಡಿ ಎಂದು ಜನರು, ವರ್ತಕರಲ್ಲಿ ಜಾಗೃತಿ ಮೂಡಿಸುತ್ತಿದ್ದ ನಗರಸಭೆ ಅಧಿಕಾರಿಗಳು ದಾಳಿ ಮೂಲಕ ಎರಡನೇ ಹಂತದ ಕ್ರಮಕ್ಕೆ ಮುಂದಾಗಿದ್ದಾರೆ.
ಅದರಂತೆ ಈ ಹಿಂದೆ ಕರಪತ್ರಗಳ ವಿತರಣೆ, ಬ್ಯಾನರ್ ಅಳವಡಿಕೆ, ಆಟೋಗಳಲ್ಲಿ ಧ್ವನಿ ಪ್ರಚಾರದ ಮೂಲಕ ನಿμÉೀಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಮತ್ತು ಮಾರಾಟ ಮಾಡದಂತೆ ನಿರಂತರವಾಗಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ನಗರಸಭೆ ಮಾಡುತ್ತಿತ್ತು. ಮನೆ ಮನೆಯಿಂದ ಕಸ ಸಂಗ್ರಹಿಸುವ ವಾಹನಗಳಲ್ಲೂ ಮೈಕ್‍ನಲ್ಲಿ ಪ್ಲಾಸ್ಟಿಕ್ ನಿμÉೀಧದ ಬಗ್ಗೆ ಮಾಹಿತಿ ಪ್ರಸಾರ ಮಾಡಲಾಗುತ್ತಿತ್ತು. ಆದಾಗ್ಯೂ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಯಂತ್ರಣಕ್ಕೆ ಬಂದಿರಲಿಲ್ಲ.
ಈ ಹಿನ್ನೆಲೆಯಲ್ಲಿ ನಿμÉೀಧಿತ ಪ್ಲಾಸ್ಟಿಕ್ ಕವರ್‍ಗಳನ್ನು ಮಾರಾಟ ಮಾಡುತ್ತಿದ್ದ ಹೋಲ್‍ಸೇಲ್ ಅಂಗಡಿಗಳು ಮತ್ತು ಪ್ರಾವಿಷನ್ ಸ್ಟೋರ್‍ಗಳ ಮೇಲೆ ನಗರಸಭೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದರು. ನಗರಸಭೆ ಪೌರಾಯುಕ್ತ ಅಶೋಕ ಬಿಲಗುಂದಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಮುಜಾಮಿಲ್ ಅಲಂ ನೇತೃತ್ವದಲ್ಲಿ ನಗರಸಭೆ ಆರೋಗ್ಯ ನಿರೀಕ್ಷಕರು ಮತ್ತು ಸಿಬ್ಬಂದಿಯು ನಿμÉೀಧಿತ ಪ್ಲಾಸ್ಟಿಕ್ ಕವರ್‍ಗಳನ್ನು ಮಾರಾಟ ಮಾಡುತ್ತಿದ್ದ ನಗರದ ಅಂಗಡಿಗಳು, ಹಲವು ಪ್ರಾವಿಷನ್ ಸ್ಟೋರ್‍ಗಳ ಮೇಲೆ ದಾಳಿ ಏಕಕಾಲಕ್ಕೆ ನಡೆಸಿದರು.
ಈ ಸಂದರ್ಭದಲ್ಲಿ ಅಂಗಡಿಗಳಲ್ಲಿ ತಪಾಸಣೆ ನಡೆಸಿ ಅಂಗಡಿಗಳಲ್ಲಿ ಸಂಗ್ರಹಿಸಿಟ್ಟಿದ್ದ ನಿμÉೀಧಿತ ಪ್ಲಾಸ್ಟಿಕ್ ವಸ್ತುಗಳಾದ ಪ್ಲಾಸ್ಟಿಕ್ ಕವರ್‍ಗಳು, ಪ್ಲಾಸ್ಟಿಕ್ ಲೇಪನವಿರುವ ಪೇಪರ್ ಕಪ್‍ಗಳು, ಬ್ಯಾಗ್‍ಗಳು, ಪ್ಲಾಸ್ಟಿಕ್ ಕಪ್‍ಗಳು, ಲೋಟಗಳು, ಟೇಬಲ್ ಮೇಲೆ ಹಾಸುವ ಪ್ಲಾಸ್ಟಿಕ್ ಹಾಳೆಗಳನ್ನು ಸೇರಿ 16 ಕೆಜಿ ವಶಕ್ಕೆ ಪಡೆಯಲಾಯಿತು.
ಇದೊಂದು ಅವಕಾಶ ಕೊಡಿ. ಮುಂದೆ ಯಾವುದೇ ಕಾರಣಕ್ಕೂ ನಿμÉೀಧಿತ ಪ್ಲಾಸ್ಟಿಕ್ ಕವರ್‍ಗಳನ್ನು ಮಾರಾಟ ಮಾಡುವುದಿಲ್ಲ ಎಂದು ಅಂಗಡಿ ಮಾಲೀಕರು ಪೌರಾಯುಕ್ತರಿಗೆ ಮನವಿ ಮಾಡಿಕೊಂಡರು. ಅದಕ್ಕೆ ಪ್ರತಿಕ್ರಿಯಿಸಿದ ಪೌರಾಯುಕ್ತ ಅಶೋಕ ಬಿಲಗುಂದಿ, ತಾವು ಮೊದಲ ಬಾರಿಗೆ ದಾಳಿ ನಡೆಸಿರುತ್ತಿರುವುದರಿಂದ ದಂಡದಿಂದ ವಿನಾಯಿತಿ ನೀಡುತ್ತೆನೆ. ಆದರೆ, ವಶಪಡಿಸಿಕೊಂಡಿರುವ ವಸ್ತುಗಳನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡುವುದಿಲ್ಲ. ಆದರೆ, ಮುಂದೆ ಯಾವುದೇ ಕಾರಣಕ್ಕೂ ಇಂತಹ ವಸ್ತುಗಳನ್ನು ಮಾರಾಟ ಮಾಡಬೇಡಿ. ಮಾರಾಟ ಮಾಡಲು ಪ್ರಯತ್ನಿಸಿದರೆ ದಂಡ ಹಾಕಲಾಗುತ್ತದೆ. ಪರಿಸರ ಸಂರಕ್ಷಣಾ ಕಾಯಿದೆಯಡಿ ದಾವೆ ಹೂಡಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಮೋಹಿನೋದ್ದಿನ್, ಶರಣು, ಹೊನಗುಂಟಿಕರ್,ಹುಣೇಶ ದೊಡ್ಡಮನಿ ಹಾಗೂ ಪೌರಕಾರ್ಮಿಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…